Categories: ಮೈಸೂರು

ನಿಸರ್ಗ ಸುಂದರ ಕರಿವರದ ರಾಜಸ್ವಾಮಿ ಬೆಟ್ಟ

ಮೈಸೂರು : ಮಳೆ ಸುರಿದಿದೆ ಭೂಮಿ ತಂಪಾಗಿ, ನಿಸರ್ಗ ಹಸಿರಾಗಿ ತಳತಳಿಸುತ್ತಿದೆ. ಇಂತಹ ಸಂದರ್ಭಗಳಲ್ಲಿ ನಿಸರ್ಗ ನಿರ್ಮಿತ ತಾಣಗಳಿಗೆ ಭೇಟಿ ನೀಡುವುದು ಎಲ್ಲಿಲ್ಲದ ಮಜಾ ಕೊಡುತ್ತದೆ. ಜತೆಗೆ ಬೇಸಿಗೆ ಕಾಲವಾಗಿರುವುದರಿಂದ ಹೆಚ್ಚಿನವರು ಪ್ರವಾಸ ತೆರಳಿ ಒಂದಷ್ಟು ಪ್ರವಾಸಿ ತಾಣಗಳನ್ನು ನೋಡಿಕೊಂಡು ಬರುವ ಪ್ರಯತ್ನ ಮಾಡುತ್ತಾರೆ.

ಒಂದು ವೇಳೆ ಚಾಮರಾಜನಗರದತ್ತ ಪ್ರವಾಸ ತೆರಳಿದ್ದೇ ಆದರೆ ಒಂದಷ್ಟು ಹೊತ್ತು ಬಿಡುವು ಮಾಡಿಕೊಂಡು  ಕರಿವರದರಾಜಸ್ವಾಮಿಬೆಟ್ಟ ಭೇಟಿ ನೀಡುವ ಪ್ರಯತ್ನ ಮಾಡಬಹುದು. ಸಾಮಾನ್ಯವಾಗಿ ನಮ್ಮೆಲ್ಲ ಮಾನಸಿಕ ವೇದನೆಯನ್ನು ದೂರಗೊಳಿಸುವ ಅದ್ಭುತ ಶಕ್ತಿಯಿರುವುದು ಪ್ರಕೃತಿಗೆ ಮಾತ್ರ ಎಂಬುವುದನ್ನು  ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸದಾ ಪೇಟೆಪಟ್ಟಣ, ಕೆಲಸ, ಕಾರ್ಯ ಎನ್ನುತ್ತಾ ಒತ್ತಡದಲ್ಲೇ ಬದುಕನ್ನು ಸಾಗಿಸುವವರು ಒಂದಷ್ಟು ಸಮಯವನ್ನು ಯಾವುದಾದರೂ ಸುಂದರ ರಮಣೀಯ ಸ್ಥಳದಲ್ಲಿ ಕಳೆದು ಬಂದರೆ ಮನಸ್ಸು ಹಗುರವಾಗುತ್ತದೆ.

ದೇವರ ಸೃಷ್ಠಿಯೋ? ಪ್ರಕೃತಿಯ ವರದಾನವೋ ಒಂದಲ್ಲ ಒಂದು ರೀತಿಯಲ್ಲಿ ಸುಂದರ ಪ್ರಕೃತಿಯ ರಮಣೀಯ ತಾಣಗಳು ಅಲ್ಲಲ್ಲಿ ಕಾಣಸಿಗುತ್ತವೆ. ಅವು ಐತಿಹಾಸಿಕ ಮತ್ತು ಪೌರಾಣಿಕವಾಗಿಯೂ ಗಮನಸೆಳೆಯುತ್ತವೆ. ಅವುಗಳಲ್ಲಿ  ಚಾಮರಾಜನಗರದ ಹೊರವಲಯದಲ್ಲಿರುವ  ಐತಿಹಾಸಿಕ ಕರಿವರದರಾಜಸ್ವಾಮಿಬೆಟ್ಟವೂ ಒಂದಾಗಿದೆ ಎಂದರೆ ತಪ್ಪಾಗಲಾರದು.

ನಗರದ ಮತ್ತು ಸುತ್ತಮುತ್ತಲಿನ ನಿಸರ್ಗಪ್ರೇಮಿಗಳಿಗೆ ಇದೊಂದು ವರದಾನ ಎಂದರೂ ತಪ್ಪಾಗಲಾರದು. ಒಂದಷ್ಟು ಸಮಯಗಳನ್ನು ಪ್ರಕೃತಿಯ ನಡುವೆ ಕಳೆದುಹೋಗಲು ಸ್ಥಳೀಯರು ಸೇರಿದಂತೆ ಪ್ರವಾಸಿಗರು ಆಗಾಗ್ಗೆ ಭೇಟಿ ನೀಡುತ್ತಲೇ  ಇರುತ್ತಾರೆ.

ಪ್ರವಾಸಿಗರ ಅನುಕೂಲಕ್ಕಾಗಿ ಕೆಲವರ್ಷಗಳ ಹಿಂದೆ ಇಲ್ಲಿ ಒಂದಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಪ್ರವಾಸಿಗರಿಗೆ ಕುಳಿತು ಅನುಕೂಲವಾಗಲೆಂದು ವೀಕ್ಷಣಾ ಗೋಪುರ ನಿರ್ಮಿಸಲಾಗಿದೆ. ಇಲ್ಲಿರುವ ನೆಲಬಾವಿಗೆ ಸುರಕ್ಷತೆಯ ದೃಷ್ಠಿಯಿಂದ ಕಬ್ಬಿಣದ ಗ್ರಿಲ್‌ಗಳನ್ನು ಅಳವಡಿಸಲಾಗಿದೆ.

ಕರಿವರದರಾಜಬೆಟ್ಟವು ಚಾಮರಾಜನಗರದಿಂದ ಕೇವಲ ನಾಲ್ಕು ಕಿಲೋಮೀಟರ್ ದೂರದಲ್ಲಿದ್ದು, ಸಮುದ್ರಮಟ್ಟದಿಂದ ೪೮೦ ಅಡಿ ಎತ್ತರದಲ್ಲಿದೆ. ಈ ಬೆಟ್ಟವನ್ನು ಹಿಂದಿನ ಕಾಲದಲ್ಲಿ ವೃದ್ಧಾಚಲ ಪರ್ವತಸ್ತೋಮ ಎಂದೇ ಕರೆಯಲಾಗುತ್ತಿತ್ತಂತೆ. ಕಲ್ಲುಬಂಡೆಗಳ ಪರ್ವತ ಹೊಂದಿರುವ ಇಲ್ಲಿಂದ ನಿಂತು ಇಣುಕಿದರೆ ಸುಂದರ ನಿಸರ್ಗ ರಮಣೀಯ ನೋಟ ಲಭ್ಯವಾಗುತ್ತದೆ.

ಈ ಬೆಟ್ಟದಲ್ಲಿ ಹೊಯ್ಸಳರ ಕಾಲದು ಎನ್ನಲಾದ ಸಂಜೀವಿನಿ ಆಂಜನೇಯಗುಡಿಯಿದ್ದು, ಈ ಗುಡಿಯಲ್ಲಿ ಸುಮಾರು ಎರಡೂವರೆ ಅಡಿ ಎತ್ತರದ ಕರಿವರದರಾಜ ವೆಂಕಟರಮಣಸ್ವಾಮಿಯ ಸುಂದರ ಮೂರ್ತಿಯೂ ಇದೆ. ಈ ದೇವಸ್ಥಾನಕ್ಕೆ ಸುಮಾರು ಮೂರು ಶತಮಾನಗಳ ಇತಿಹಾಸವಿದ್ದು ಕ್ರಿ.ಶ. 1688ರಲ್ಲಿ ನಿರ್ಮಾಣ ಮಾಡಿರಬಹುದೆಂದು ಹೇಳಲಾಗುತ್ತಿದೆ.

ಮೈಸೂರು ಒಡೆಯರ್ ಕಾಲದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಈ ಬೆಟ್ಟಕ್ಕೆ ಭೇಟಿ ನೀಡಿದ್ದರು ಅಲ್ಲದೆ ದೇವಸ್ಥಾನಕ್ಕೆ ಕಚ್ಚಾ ರಸ್ತೆ ಹಾಗೂ ಮೆಟ್ಟಿಲನ್ನು ನಿರ್ಮಿಸಲು ವ್ಯವಸ್ಥೆ ಮಾಡಿದರು ಎನ್ನಲಾಗಿದೆ.

Ashika S

Recent Posts

ನಾಳೆ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ : ಇಂದು ರೋಡ್‌ ಶೋ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಒಂದು…

4 mins ago

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…

1 hour ago

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

2 hours ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

2 hours ago

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

2 hours ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

2 hours ago