ಮೈಸೂರು: ಬಿಜೆಪಿಯ ರೈತ ವಿರೋಧಿ ನೀತಿಗಳು, ಅತಿರೇಕದ ಭ್ರಷ್ಟಾಚಾರದಿಂದಾಗಿ ಭಾರತ ಶ್ರೀಲಂಕಾದ ಹಾದಿಯಲ್ಲಿ ಸಾಗಲಿದೆ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಭಾರತ ಶ್ರೀಲಂಕಾ ಹಾದಿಯಲ್ಲಿ ಹೋಗುವುದನ್ನು ತಡೆಯಲು ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಪಿ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಹೇಳಿದರು.
ಬಿಜೆಪಿ ಸಮಾಜವನ್ನು ವಿಭಜಿಸುತ್ತಿದೆ ಮತ್ತು ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ತರುತ್ತಿದೆ. ಪ್ರಧಾನಿ ಮೋದಿಯವರ ದುರಾಡಳಿತವು ಹೆಚ್ಚಿನ ಹಣದುಬ್ಬರ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಹೆಚ್ಚಿನ ನಿರುದ್ಯೋಗ ಮತ್ತು ಕೃಷಿ ಕ್ಷೇತ್ರದಲ್ಲಿ ಸಮಸ್ಯೆಗಳಿಗೆ ಕಾರಣವಾಗಿದೆ” ಎಂದು ವಾಗ್ದಾಳಿ ನಡೆಸಿದರು.