Categories: ಮೈಸೂರು

ಮಂಡ್ಯ ಪೊಲೀಸ್ ಲಾಕಪ್‍ನಲ್ಲಿ ವ್ಯಕ್ತಿ ಅನುಮಾನಾಸ್ಪದ ಸಾವು

ಮಂಡ್ಯ: ಇಲ್ಲಿನ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಲಾಕಪ್ ಡೆತ್ ಎಂಬ ಆರೋಪ ಕೇಳಿ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಅಮಾನತುಗೊಳಿಸಲಾಗಿದೆ.

ಮೂರ್ತಿ ಎಂಬಾತನೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ದುರ್ದೈವಿ. ಈತನನ್ನು ಜು.9ರಂದು ದ್ವಿಚಕ್ರ ವಾಹನಗಳ ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಆದರೆ ಗುರುವಾರ ಮಧ್ಯರಾತ್ರಿ ಈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೋಷಕರಿಗೆ ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.

ಆದರೆ ದಿನದ 24 ಗಂಟೆಗಳ ಕಾಲ ತೆರೆದಿರುವ ಪೊಲೀಸ್ ಠಾಣೆಯಲ್ಲಿಯೇ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಳ್ಳಲು ಹೇಗೆ ಸಾಧ್ಯ? ಹಾಗೂ ಸಾವಿನ ವಿಚಾರವನ್ನು ತಾಸುಗಳವರೆಗೆ ಮುಚ್ಚಿಟ್ಟ ಕ್ರಮವೇನು? ಎಂದು ಪೋಷಕರು, ಪರಿಚತರು ಹಾಗೂ ದಲಿತ ಸಂಘಟನೆಗಳ ಸದಸ್ಯರು ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಅಲ್ಲದೆ ಕಾನೂನು ಮೀರಿ ಮೂರು ದಿನಗಳ ಕಾಲ ಅಕ್ರಮವಾಗಿ ಠಾಣೆಯಲ್ಲಿರಿಸಿಕೊಂಡಿದ್ದಲ್ಲದೆ, ಆರೋಪಿ ಮೂರ್ತಿಯನ್ನು ಉಪವಾಸ ಕೆಡವಲಾಗಿತ್ತು. ಜೊತೆಗೆ ಚಿತ್ರಹಿಂಸೆ ನೀಡಲಾಗಿತ್ತು ಎಂಬ ಆರೋಪವೂ ಕೇಳಿ ಬಂದಿದೆ.

ಘಟನಾ ಸ್ಥಳಕ್ಕೆ ಎಸ್ಪಿ ರಾಧಿಕಾ ಹಾಗೂ ಎಎಸ್ಪಿ ಲಾವಣ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ, ದಲಿತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟಿಸುತ್ತಿದ್ದ ಮಿಮ್ಸ್‍ನ ಶವಾಗಾರದ ಬಳಿ ತೆರಳಿ ಸಂಘಟನೆಗಳ ಮುಖಂಡರೊಂದಿಗೆ ಮಾತುಕತೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಠಾಣೆಯ ಪಿಎಸ್‍ಐ ಆನಂದ್ ಕುಮಾರ್, ಹೆಡ್‍ಕಾನ್‍ಸ್ಟೇಬಲ್ ಮಾದೇಶ್, ಪೇದೆಗಳಾದ ಮಲ್ಲಿಕಾರ್ಜುನ ಜಳಕಿ ಹಾಗೂ ವರದರಾಜು ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಅವರು ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Desk

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

5 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

5 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

6 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

6 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

6 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

6 hours ago