ಮೈಸೂರು: ಸಾವಿನಲ್ಲೂ ತಾಯಿ ಮಗ ಒಂದಾದ ಘಟನೆ ಮೈಸೂರಿನ ಅಗ್ರಹಾರದಲ್ಲಿ ನಡೆದಿದೆ. ತಾಯಿ ಶಾಂತಮ್ಮಣ್ಣಿ (72), ಮಗ ದಿಲೀಪ್ (49) ಮೃತಪಟ್ಟವರು.
ತಾಯಿ, ಮಗ ಇಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದರು. ತಾಯಿಗೆ ಕಿಡ್ನಿಗೆ ಸಂಬಂಧಿಸಿದಂತೆ ಸಮಸ್ಯೆಯಿತ್ತು. ಮಗನಿಗೆ ಹೃದಯ ಸಂಬಂಧಿ ಸಮಸ್ಯೆಯಿತ್ತು. ಬೆಳಗ್ಗೆ 6 ಗಂಟೆಗೆ ಮಗ ಸಾವಿಗೀಡಾಗಿದ್ದು, ಮಗನ ಸಾವಿನ ಸುದ್ದಿ ಕೇಳಿದ ಬಳಿಕ ತಾಯಿಯೂ ಮೃತಪಟ್ಟಿದ್ದಾರೆ.
ಇಬ್ಬರ ಅಂತ್ಯಕ್ರಿಯೆ ಒಟ್ಟಿಗೆ ನಡೆಸಲು ಕುಟುಂಬದವರು ತೀರ್ಮಾನಿಸಿ ವಿದ್ಯಾರಣ್ಯಪುರಂನ ರುದ್ರಭೂಮಿಯಲ್ಲಿ ಇಬ್ಬರ ಅಂತ್ಯಕ್ರಿಯೆ ನಡೆಸಲಾಯಿತು.