Categories: ಮೈಸೂರು

ಮಹದಾಯಿ ಯೋಜನೆಗೆ ಸಿಎಂ ಕಲ್ಲು ಹಾಕುತ್ತಿದ್ದಾರೆ: ಬಿ.ಎಸ್ ವೈ ಆರೋಪ

ಮೈಸೂರು: ಮಹದಾಯಿ ಯೋಜನೆ ಬಗ್ಗೆ ಹೋರಾಟ ಮಾಡುತ್ತಿರುವುದು ಬಿಜೆಪಿ ಪಕ್ಷ, ಇದಕ್ಕೆ ಕಲ್ಲು ಹಾಕುತ್ತಿರುವುದು ಸಿಎಂ ಸಿದ್ದರಾಮಯ್ಯ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮೈಸೂರಿನಲ್ಲಿ ಸಿಎಂ ವಿರುದ್ದ ವಾಗ್ದಾಳಿ ನಡೆಸಿದರು.

ಇಂದು ನಗರದ ಖಾಸಗಿ ಹೊಟೇಲ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ಎಸ್ ಯಡಿಯೂರಪ್ಪ, ಮಹದಾಯಿ ಯೋಜನೆಗೆ ಹೋರಾಟ ನಡೆಸುತ್ತಿರುವುದು ಬಿಜೆಪಿ ಪಕ್ಷ, ಇದಕ್ಕೆ ಕಲ್ಲು ಹಾಕುತ್ತಿರುವುದು ಸಿಎಂ ಸಿದ್ದರಾಮಯ್ಯ ಎಂದು ವಾಗ್ದಾಳಿ ನಡೆಸಿದ ಯಡಿಯೂರಪ್ಪ, ಗೋವಾದ ಮುಖ್ಯಮಂತ್ರಿ ನೀರು ಬಿಡುತ್ತೇವೆ ಎಂದು ಹೇಳಿದ ತಕ್ಷಣ ಗೋವಾ ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ಒಂದು ಹನಿ ನೀರನ್ನ ಬಿಡುವುದಿಲ್ಲ ಎಂದು ಹೇಳಿಕೆ ನೀಡಿದರು.

ಕಾಂಗ್ರೆಸ್ ಅವಿಗೆ ಗೊಂದಲ ಉಂಟು ಮಾಡುವುದು ಅವರ ಉದ್ದೇಶ. ಇದನ್ನ ಮಹಾದಾಯಿ ಹೋರಾಟಗಾರರು ಅರ್ಥ ಮಾಡಿಕೊಳ್ಳಬೇಕು. ನಾವು ಹೋರಾಟ ಮಾಡಬೇಕಾಗಿರುವುದು ಕಾಂಗ್ರೆಸ್ ವಿರುದ್ದ, ಸಿದ್ದರಾಮಯ್ಯನವರ ನಡವಳಿಕೆ ವಿರುದ್ದ ಎಂದರು ಕಿಡಿಕಾರಿದರು.

25ರ ಬಂದ್ ಗೆ ಬೆಂಬಲ ಇದೆ ಎಂದು ಹೇಳುವುದಿಲ್ಲ: ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ 25ರ ರಾಜ್ಯ ಬಂದ್ ಗೆ ನಾನು ಬೆಂಬಲ ಇದೆ ಎಂದು ಹೇಳುವುದಿಲ್ಲ. ಮಹದಾಯಿ ವಿಷಯಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಬಂದ್ ನ ಅಗತ್ಯವಿಲ್ಲ, ಬಂದ್ ನ ಅಗತ್ಯವಿರುವುದು ತೊಂದರೆಯಾಗುತ್ತಿರುವ ಭಾಗದಲ್ಲಿ ಮಾಡಬೇಕು ಹೊರತು, ಅದಕ್ಕೂ ಮೈಸೂರಿಗೆ ಏನು ಸಂಬಂಧ ಎಂದ ಪ್ರಶ್ನೆ ಮಾಡಿದರು.

25 ರಂದು ಮೈಸೂನಲ್ಲಿ ಖಂಡಿತವಾಗಿಯು ಅಮಿತ್ ಶಾ ಅವರ ರ್ಯಾಲಿ ನಡೆಯುತ್ತದೆ.

Desk

Recent Posts

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

11 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

27 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

52 mins ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

1 hour ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

9 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

9 hours ago