ಮೈಸೂರು: ಸಭೆಯಲ್ಲಿ ಮಾಸ್ಕ್ ಧರಿಸದ ಜಯಪುರ ಹೋಬಳಿ ಕಡಕೊಳ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವೆಂಕಟೇಶ್ ಅವರಿಗೆ ಪಾಲಿಕೆ ಅಧಿಕಾರಿಗಳು ಸ್ಥಳದಲ್ಲೇ ₹ 250 ದಂಡ ವಿಧಿಸಿದ್ದಾರೆ.
‘ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್–19 ನಿಯಂತ್ರಣ ಸಂಬಂಧ ಗುರುವಾರ ನಡೆದ ಸಭೆಯಲ್ಲಿ ಸರಿಯಾಗಿ ಮಾಸ್ಕ್ ಧರಿಸದೆ ಇರುವುದಕ್ಕೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಎರಡು ಬಾರಿ ಎಚ್ಚರಿಕೆ ನೀಡಿದರೂ ಅವರು ಮತ್ತೆ ನಿರ್ಲಕ್ಷ್ಯ ತೋರಿದರು’ ಎಂದು ಪಾಲಿಕೆ ಆರೋಗ್ಯಾಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಸಾರ್ವಜನಿಕ ಸ್ಥಳ, ಸಭೆ/ಸಮಾರಂಭಗಳಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಈ ಸಂಬಂಧ ಕಟ್ಟುನಿಟ್ಟಿನ ಕ್ರಮ ಜಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.