ಮೈಸೂರು

ಮೇಕೆದಾಟು: ಕೇಂದ್ರದಿಂದ ಶೀಘ್ರ ಅನುಮೋದನೆಯ ವಿಶ್ವಾಸವಿದೆ ಎಂದ ಸಿಎಂ

ಮೈಸೂರು: ಮೇಕೆದಾಟು ಯೋಜನೆಯ ಡಿಪಿಆರ್‌ಗೆ ಕೇಂದ್ರ ಸರ್ಕಾರದಿಂದ ಶೀಘ್ರವೇ ಅನುಮೋದನೆ ದೊರೆಯುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಮೇಕೆದಾಟು ಯೋಜನೆಯ ಡಿಪಿಆರ್ ಅನ್ನು ಕೇಂದ್ರ ಜಲ ಆಯೋಗಕ್ಕೆ ಈಗಾಗಲೇ ಸಲ್ಲಿಸಲಾಗಿದೆ. ಕಳೆದ ಬಾರಿ ದೆಹಲಿಗೆ ತೆರಳಿದಾಗ ಈ ಯೋಜನೆಗೆ ಒಪ್ಪಿಗೆ ನೀಡುವುದಾಗಿ ಭರವಸೆ ದೊರೆತಿದೆ. ಇದಕ್ಕೆ ಕೆಲವು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕಾಗಿದೆ. ಇದು ಪೂರ್ಣಗೊಂಡ ಕೂಡಲೇ ಕೇಂದ್ರದ ಒಪ್ಪಿಗೆ ದೊರೆಯುವ ವಿಶ್ವಾಸವಿದೆ ಎಂದು ತಿಳಿಸಿದರು.

ಮತ್ತೊಮ್ಮೆ ಈ ಉದ್ದೇಶಕ್ಕಾಗಿಯೇ ದೆಹಲಿಗೆ ತೆರಳಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿ ವಸ್ತುಸ್ಥಿತಿಯನ್ನು ವಿವರಿಸಲಾಗುವುದು. ಸುಪ್ರೀಂ ಕೋರ್ಟಿನ ಆದೇಶಗಳ ಕುರಿತು ಮನವರಿಕೆ ಮಾಡಿಕೊಡಲಾಗುವುದು. ಇದರೊಂದಿಗೆ ರಾಜ್ಯದ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ದೆಹಲಿಯಲ್ಲಿ ವಕೀಲರ ತಂಡದೊಂದಿಗೆ ಸಭೆ ನಡೆಸಿ, ಕಾವೇರಿ ತೀರದಲ್ಲಿ ಹೆಚ್ಚುವರಿ ನೀರಿನ ಹಕ್ಕನ್ನು ಕಾನೂನು ಪ್ರಕಾರ ಪಡೆದುಕೊಳ್ಳುವ ಕುರಿತು ಸಹ ಚರ್ಚಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

Sampriya YK

Recent Posts

‘ಬಿರಿಯಾನಿ ಹಟ್’ ಹೊಟೇಲ್ ನಲ್ಲಿ ಬೆಂಕಿ ಅವಘಡ : ಲಕ್ಷಾಂತರ ರೂ.ನಷ್ಟ

ಉಡುಪಿಯ ಕರಾವಳಿ ಜಂಕ್ಷನ್ ಬಳಿ ಇರುವ ಬಿರಿಯಾನಿ ಹಟ್ ಹೊಟೇಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು…

6 mins ago

ಉಡುಪಿ : ಮೇ 17ರಿಂದ ಪ್ರಾಚೀನ ಕಲ್ಲಚ್ಚು ಕಲಾಕೃತಿಗಳ ಪ್ರದರ್ಶನ

1890-1947ರ ಅವಧಿಯ ಭಿತ್ತಿಪತ್ರ, ಬಟ್ಟೆ ಲೇಬಲ್, ಬೆಂಕಿ ಪೊಟ್ಟಣದ ಮೇಲಿನ ಲೇಬಲ್‌ಗಳ ಕಲ್ಲಚ್ಚು ಕಲಾ ಪ್ರದರ್ಶನವನ್ನು ಕುಂಜಿಬೆಟ್ಟುವಿನ ಅದಿತಿ ಕಲಾ…

17 mins ago

ನಿವೃತ್ತಿ ಘೋಷಿಸಿದ ಪ್ರಸಿದ್ಧ ಫುಟ್​ಬಾಲ್ ಆಟಗಾರ ಸುನಿಲ್ ಛೆಟ್ರಿ

ಫುಟ್​ಬಾಲ್ ಲೆಜೆಂಡ್ ಆಟಗಾರ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್​ಬಾಲ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ಕೊಲ್ಕತ್ತಾದ ಸಾಲ್ಟ್ ಲೇಕ್…

28 mins ago

90ರ ದಶಕದ ಫೋನನ್ನು ಮರು ಪರಿಚಯಿಸಿದ ನೋಕಿಯಾ

ನೋಕಿಯಾ ತನ್ನ 3210 ಫೋನನ್ನು ಮತ್ತೆ ಮರು ಪರಿಚಯಿಸಿದೆ. 90ರ ದಶಕದಲ್ಲಿ ಐಕಾನಿಕ್​ ಫೋನ್​ ಆಗಿ ಮಾರುಕಟ್ಟೆಗೆ ಬಂದ ನೋಕಿಯಾ…

33 mins ago

ಸುಬ್ರಹ್ಮಣ್ಯದಲ್ಲಿ ಭಾರಿ ಗಾಳಿ-ಮಳೆ : ತೋಟದಲ್ಲಿ ಮರ ಬಿದ್ದು ಮಹಿಳೆ ಸಾವು

  ಗಾಳಿ - ಮಳೆಗೆ ಮರ ಬಿದ್ದು ವೃದ್ಧೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಮೇ 16…

1 hour ago

‘ಜೆಟ್ ಏರ್ವೇಸ್’ ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ನಿಧನ

ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರ ಪತ್ನಿ ಅನಿತಾ ಗೋಯಲ್ ಇಂದು ಬೆಳಗ್ಗೆ ಮುಂಬೈನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

1 hour ago