ಮೈಸೂರು: ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರದಿಂದ ವಿರೋಧ ಹಿನ್ನೆಲೆಯಲ್ಲಿ ಮೈಸೂರು ಕನ್ನಡ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು.
ಮೈಸೂರಿನ ಕಾಡಾ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ತಮಿಳುನಾಡು ಸರ್ಕಾರ ಹಾಗೂ ಸಂಸದರ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಸರ್ಕಾರ ಕೂಡಲೇ ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಅನುಮತಿ ನೀಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ವೇದಿಕೆಯ ಅಧ್ಯಕ್ಷ ಎಸ್.ಬಾಲಕೃಷ್ಣ, ಡಾ.ರಂಗಸ್ವಾಮಿ, ಡಾ.ಸುಭಾಷ್, ನಾಗರಾಜು, ಮಮತ, ಸೇರಿದಂತೆ ಹಲವರು ಪಾಲ್ಗೊಂಡಿದ್ದರು.