News Karnataka Kannada
Sunday, May 12 2024
ಮೈಸೂರು

ಮೈಸೂರು ಜಿಲ್ಲೆಯಲ್ಲಿ ದಸರಾ ರಜೆ ದಿನಾಂಕ ಮಾರ್ಪಡಿಗೆ ಡಿಸಿ ಪತ್ರ

Photo Credit :

ಮೈಸೂರು ಜಿಲ್ಲೆಯಲ್ಲಿ ದಸರಾ ರಜೆ ದಿನಾಂಕ ಮಾರ್ಪಡಿಗೆ ಡಿಸಿ ಪತ್ರ

ಮೈಸೂರು:  ದಸರಾ ಸಾಂಸ್ಕೃತಿಕ ಹಬ್ಬದಲ್ಲಿ ಮೈಸೂರು ಜಿಲ್ಲೆಯ ಮಕ್ಕಳು ಪಾಲ್ಗೊಳ್ಳಲು ಅನುಕೂಲವಾಗುವಂತೆ ದಸರಾ ರಜೆಯ ದಿನಾಂಕವನ್ನು ಮಾರ್ಪಾಡು ಮಾಡುವಂತೆ ಜಿಲ್ಲಾಧಿಕಾರಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಈ ಬಾರಿ ದಸರಾ ರಜೆಯನ್ನು ಆಕ್ಟೋಬರ್ 9ರಿಂದ 27 ರವರೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ರಜೆಯನ್ನು ಘೋಷಿಸಿದೆ. ಆದರೆ ದಸರಾ ಕಾರ್ಯಕ್ರಮಗಳು ಅಕ್ಟೋಬರ್ 1 ರಿಂದ 11 ರವರೆಗೆ ನಡೆಯಲಿದ್ದು, ಅದರಲ್ಲಿ ಮೈಸೂರು ದಸರಾದಲ್ಲಿ ಮಕ್ಕಳ ದಸರಾ ಕಾರ್ಯಕ್ರಮ ಅಕ್ಟೋಬರ್ 4 ರಿಂದ 6ರವರೆಗೆ ಮೂರು ದಿನಗಳ ಕಾಲ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಮಕ್ಕಳಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದೆ. ಆದರೆ ಈ ಸಮಯದಲ್ಲಿ ಮಕ್ಕಳಿಗೆ ದಸರಾ ರಜೆ ಇರುವುದಿಲ್ಲ. ಇದರಿಂದ ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಿಲ್ಲ. ಆದ್ದರಿಂದ ಮೈಸೂರು ಜಿಲ್ಲೆಯಲ್ಲಿ ದಸರಾ ರಜೆಯನ್ನು ಅಕ್ಟೋಬರ್ 3 ರಿಂದ ಪ್ರಾರಂಭಿಸಲು ಮಾರ್ಪಡು ಮಾಡಬೇಕಾಗಿ ಬೆಂಗಳೂರು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ಪತ್ರ ಬರೆದು ದಿನಾಂಕ ಮಾರ್ಪಾಡು ಮಾಡುವಂತೆ ಕೇಳಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು