News Karnataka Kannada
Saturday, May 04 2024
ಮೈಸೂರು

ಮೈಸೂರು ದಸರಾ: ಅರಮನೆ ಆವರಣದಲ್ಲಿ ಸಂಗೀತ ರಸದೌತಣ

Dasara
Photo Credit :

ಮೈಸೂರು: ಬೆಂಗಳೂರಿನ ಅಮೋಘ ವರ್ಷ ಡ್ರಮ್ಸ್ ಕಲೆಕ್ಟಿವ್ ತಂಡದವರು ನಡೆಸಿಕೊಟ್ಟ ಮಿಶ್ರವಾದನ ಗಾಯನದಲ್ಲಿ ಮೂಡಿಬಂದ ಅಮೋಘ ರಾಗಗಳು ಪ್ರೇಕ್ಷಕರನ್ನು ವಿಸ್ಮಯಗೊಳಿಸಿತು.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಂಗಳೂರಿನ ಅಮೋಘ ವರ್ಷ ಡ್ರಮ್ಸ್ ಕಲೆಕ್ಟಿವ್ ತಂಡದವರು ಮಿಶ್ರ ವಾದನ ಗಾಯನ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಮೊದಲಿಗೆ ಅಮೋಘ ವರ್ಷ ತಂಡದ ಸಂಯೋಜಿಸಿದ ಕದನ ಕುತೂಹಲ, ಜಾಜ್ ಪೀಸ್ – ಸ್ಜಾರ್ ದೋಸ್, ಶಿವಕಾಮೇಶ್ವರಿ ಕಲ್ಯಾಣಿ ರಾಗ ಆದಿ ತಾಳದಲ್ಲಿ ನುಡಿಸಿ ನೆರೆದಿದ್ದವರನ್ನು ರಂಜಿಸಿ, ರೋಮಾಂಚನಗೊಳಿಸಿದರು.

ಕಾರ್ಯಕ್ರಮದಲ್ಲಿ ಮುಡಾ ಅಧ್ಯಕ್ಷ ಹೆಚ್.ವಿ. ರಾಜೀವ್, ಅರಣ್ಯ ವಸತಿ ಹಾಗೂ ವಿಹಾರಧಾಮ ಸಂಸ್ಥೆಯ ಅಧ್ಯಕ್ಷ ಅಪ್ಪಣ್ಣ, ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ ಎನ್.ವಿ.ಫಣೀಶ್, ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಜಿಲ್ಲಾ ಪಂಚಾಯತ್ ಸಿಇಒ ಎ.ಎಂ ಯೋಗೀಶ್, ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ, ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆಯ ಜಂಟಿ ನಿರ್ದೇಶಕ ಮಲ್ಲಿಕಾರ್ಜುನಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು