ಮೈಸೂರು : ಮೈಸೂರು ದಸರಾ ಕಾರ್ಯಕ್ರಮಗಳ ಸಂಪೂರ್ಣ ಪಟ್ಟಿಯನ್ನು ಸರ್ಕಾರ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಇಂದು ಮೈಸೂರಿನಲ್ಲಿ ನಡೆದ ದಸರಾ ಕಾರ್ಯಕಾರಿ ಸಮಿತಿ ಸಭೆಯ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಸುದ್ದಿಗೋಷ್ಠಿ ನಡೆಸಿ ದಸರಾ ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ನೀಡಿದರು. ಮೈಸೂರು ದಸರಾವನ್ನು ಎಷ್ಟೇ ಸರಳವಾಗಿ ಆಚರಿಸಿದರೂ ಅದರ ಮುಖ್ಯ ಆಕರ್ಷಣೆ ಜಂಬೂ ಸವಾರಿ. ಹೀಗಾಗಿ ಈ ಬಾರಿಯ ದಸರಾ ಸಂಬಂಧಿತ ಸಭೆಯಲ್ಲಿ ಜಂಬೂ ಸವಾರಿ ಸೇರಿದಂತೆ ಕೆಲ ವಿಚಾರಗಳ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗಿದ್ದು, ದಸರಾ ಆನೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಕಾರ್ಯಕ್ರಮಗಳ ವಿವರ ಈ ರೀತಿ ಇವೆ ಎಂದು ಹೇಳಿದರು. ಮೈಸೂರು ದಸರಾ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ * ಸೆಪ್ಟೆಂಬರ್ 13 ರಂದು ಬೆಳಿಗ್ಗೆ 9.30ಕ್ಕೆ ಗಜಪಡೆ ಪೂಜೆ ಮಾಡಿ, ವೀರನಹೊಸಹಳ್ಳಿಯಿಂದ ಎಂಟು ಆನೆಗಳನ್ನು ಕರೆ ತರಲಾಗುತ್ತದೆ. * ಸೆಪ್ಟೆಂಬರ್ 16 ರಂದು ಮೈಸೂರು ಅರಮನೆ ಬಳಿ ಗಜಪಡೆಯನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಲಾಗುವುದು. * ಅಕ್ಟೋಬರ್ 7ರಿಂದ 15 ರವರೆಗೆ ದಸರಾ ಮಹೋತ್ಸವದಲ್ಲಿ ದೀಪಾಲಂಕಾರವಿರುತ್ತದೆ. * ಅಕ್ಟೋಬರ್ 1ರಿಂದ 9 ದಿನ ಅರಮನೆ ಆವರಣದಲ್ಲಿ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳಿರುತ್ತವೆ. * ಅಕ್ಟೋಬರ್ 7ರಂದು ಚಾಮುಂಡಿ ಬೆಟ್ಟದಲ್ಲಿ ಅಧಿಕೃತ ಮೈಸೂರು ದಸರಾ ಉದ್ಘಾಟನೆ. * ಅಕ್ಟೋಬರ್ 15ರ ಸಂಜೆ 4.36ಕ್ಕೆ ಮೈಸೂರು ಅರಮನೆ ಆವರಣದಲ್ಲಿ ನಂದಿ ಪೂಜೆ. * ಅಕ್ಟೋಬರ್ 15ರ ಸಂಜೆ 5ಕ್ಕೆ ಅರಮನೆ ಆವರಣದಲ್ಲಿ ಸರಳ ಹಾಗೂ ಸಾಂಪ್ರದಾಯಿಕವಾಗಿ ಜಂಬೂಸವಾರಿ. * ಅಕ್ಟೋಬರ್ 16ರಂದು ಗಜಪಡೆಗೆ ಬೀಳ್ಕೊಡುಗೆ. | |
ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…
ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್ಐಆರ್ ದಾಖಲಾಗಿದೆ.ಶಾಸಕರು ತನ್ನ…
ಕಾರು ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್ ಮಾಡಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಬ್ಯಾಂಕ್ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.
ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…