News Karnataka Kannada
Thursday, May 02 2024
ಮೈಸೂರು

ಮೈಸೂರು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ : ಏಳನೇ ಆರೋಪಿ ಬಂಧನ

Arrest 22082021
Photo Credit :

ಮೈಸೂರು : ಮೈಸೂರು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಏಳನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನಲ್ಲಿ ಆರೋಪಿ ತಲೆಮರೆಸಿಕೊಂಡಿದ್ದ, ತಮಿಳುನಾಡು ಪೊಲೀಸರ ಸಹಾಯದಿಂದ ಮೈಸೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯನ್ನು ತಮಿಳುನಾಡಿನಿಂದ ಇಂದು ಮೈಸೂರಿಗೆ ಕರೆತರಲಾಗುವುದು. ಘಟನೆ ನಂತರದ ನಾಲ್ಕು ದಿನಗಳಲ್ಲಿ ಐವರನ್ನು ಬಂಧಿಸಲಾಗಿತ್ತು. ಆರೋಪಿಗಳು ತಾವು ಏಳು ಮಂದಿ ಇದ್ದುದ್ದಾಗಿ ಹೇಳಿದ್ದು, ತೀವ್ರ ಶೋಧದ ನಂತರ ಆರನೇ ಆರೋಪಿ ಸಿಕ್ಕಿಬಿದ್ದಿದ್ದ. ಆದರೆ ಏಳನೇ ಆರೋಪಿ ಪೊಲಿಸರಿಂದ ತಲೆಮರೆಸಿಕೊಂಡಿದ್ದ.

ಇದೀಗ ಕಾರ್ಯಾಚರಣೆ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಕಸ್ಟಡಿಯಲ್ಲಿದ್ದ ಆರೋಪಿಗಳಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರು ಐವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮತ್ತೊಬ್ಬ ಬಾಲಾಪರಾಧಿಯಾಗಿದ್ದು, ಆತನನ್ನು ಬಾಲಮಂದಿರಕ್ಕೆ ಕಳುಹಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು