Categories: ಮೈಸೂರು

ರಸ್ತೆ ಅಪಘಾತ : 40ಕ್ಕೂ ಅಧಿಕ ಮಂದಿಗೆ ಗಾಯ

ಮೈಸೂರು: ರಾಜ್ಯದಲ್ಲಿ ಇಂದೊಂದು ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಅಪಘಾತದಲ್ಲಿ 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಆ ಪೈಕಿ ಕೆಲವರ ಪರಿಸ್ಥಿತಿ ಗಂಭೀರವಾಗಿದೆ. ಮೈಸೂರು ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ.

ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಹೊಸ ಅಗ್ರಹಾರ ಬಳಿ ಹಾಸನ‌-ಮೈಸೂರು ಹೆದ್ದಾರಿಯಲ್ಲಿ ಬಸ್ ಮತ್ತು ಕ್ಯಾಂಟರ್ ಮುಖಾಮುಖಿಯಾಗಿ ಈ ಅಪಘಾತ ಸಂಭವಿಸಿದೆ.

ಪರಿಣಾಮವಾಗಿ 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಜಖಂಗೊಂಡಿರುವ ಕ್ಯಾಂಟರ್​
ಬಸ್ ಚಾಲಕ, ನಿರ್ವಾಹಕ ಸೇರಿದಂತೆ ಅನೇಕ ‌ಪ್ರಯಾಣಿಕರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಭೇರ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಕೆಲವರನ್ನು ಹೆಚ್ಚಿನ ಚಿಕಿತ್ಸೆಗೆ ತಾಲೂಕು ಹಾಗೂ‌ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. ಡಿಕ್ಕಿಯಾದ ರಭಸಕ್ಕೆ ಬಸ್ ಹಾಗೂ ಕ್ಯಾಂಟರ್ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಕೆ.ಆರ್.ನಗರ ಪೊಲೀಸರು ಧಾವಿಸಿ ಅಗತ್ಯ ಕ್ರಮಕೈಗೊಂಡಿದ್ದಾರೆ.

Ashika S

Recent Posts

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

24 seconds ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

4 mins ago

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

19 mins ago

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

34 mins ago

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

42 mins ago

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

56 mins ago