Categories: ಮೈಸೂರು

ರಾಗಿ ಖರೀದಿಯಲ್ಲಿ ಅಕ್ರಮ ಎಸಗಿದರೆ ಕಠಿಣ ಕ್ರಮ

ಕೆ.ಆರ್.ನಗರ: ಸರ್ಕಾರದ ಸಹಾಯಧನದಡಿಯಲ್ಲಿ ರಾಗಿ ಖರೀದಿ ಮಾಡಲಾಗುತ್ತಿದ್ದು, ಖರೀದಿ ಕೇಂದ್ರದಲ್ಲಿ ಅಕ್ರಮ ನಡೆದರೆ ಅಂತಹವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ತಹಶೀಲ್ದಾರ್ ಎಸ್.ಸಂತೋಷ್ ಎಚ್ಚರಿಕೆ ನೀಡಿದ್ದಾರೆ.

ಎಪಿಎಂಸಿ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿದ ಅವರು ರೈತರಿಂದ ಆಹವಾಲು ಆಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರ್ಕಾರದ ನಿಯಾಮಾನುಸಾರ ರಾಗಿ ಖರೀದಿ ಪ್ರಕ್ರಿಯೆ ನಡೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರಲ್ಲದೆ,  ರೈತರು ಖರೀದಿ ಕೇಂದ್ರಕ್ಕೆ ರಾಗಿ ಸರಬರಾಜು ಮಾಡಲು ಸರ್ಕಾರದ ನಿಯಮಾನುಸಾರ ವೇಬಿಡ್ಜ್‌ನಲ್ಲಿ ತೂಕ ಮಾಡಿ ನೀಡಬೇಕು ಆದರೆ ಖರೀದಿ ಕೇಂದ್ರದ ಅಧಿಕಾರಿಗಳು ರೈತರನ್ನು ದಾರಿ ತಪ್ಪಿಸಿ 52 ಕೆ.ಜಿ. ತೂಕದ ಮೂಟೆಗಳನ್ನೇ ನೀಡಬೇಕೆಂದು ಸೂಚನೆ ನೀಡಿದ್ದಾರೆ. ಜತೆಗೆ ಖಾಲಿ ಚೀಲದ ಹಣವನ್ನು ರೈತರಿಗೆ ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ ಎಂದು ತಿಳಿಸಿದರು.

ರಾಗಿ ಕೇಂದ್ರದ ಅಧಿಕಾರಿಗಳು ಎಪಿಎಂಸಿಯ ವೇಬಿಡ್ಜ್‌ನಲ್ಲೇ ತೂಕ ಹಾಕಿ ತರಬೇಕು ಎಂದು ರೈತರಿಗೆ ಗೊಂದಲ ಸೃಷ್ಠಿ ಮಾಡಿರುವುದಲ್ಲದೆ ಪ್ರತಿ ಮೂಟೆಗೆ 100 ರೂ ಲಂಚ ನೀಡಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತಿರುವ ಬಗ್ಗೆ ತಮ್ಮ ಗಮನಕ್ಕೆ ಬರಲಾಗಿದೆ ಎಂದು ತಿಳಿಸಿದ ತಹಶೀಲ್ದಾರ್ ಸಂತೋಷ್ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಂಬಂಧ ಅಧಿಕಾರಿಗಳಿಗೆ ಪತ್ರ ಬರೆಯಲಾಗುತ್ತದೆ ಎಂದು ಹೇಳಿದರು.

ಸರ್ಕಾರದ ನಿಯಮಾನುಸಾರ ರೈತರಿಂದ ಬಂದ ರಾಗಿಯನ್ನು ಕೃಷಿ ಇಲಾಖೆಯವರು ಅದರ ಗುಣಮಟ್ಟ ಪರಿಶೀಲಿಸಿ ಆನಂತರ ದಾಸ್ತಾನು ಮಾಡಬೇಕು ಆದರೆ ಚುಂಚನಕಟ್ಟೆ, ಸಾಲಿಗ್ರಾಮ ಮತ್ತು ಕೆ.ಆರ್.ನಗರ ಖರೀದಿ ಕೇಂದ್ರಗಳಿಗೆ ಕೃಷಿ ಇಲಾಖೆಯಿಂದ ನೇಮಕ ಮಾಡಲಾದ ಯಾವ ಅಧಿಕಾರಿಯೂ ಸ್ಥಳದಲ್ಲಿಲ್ಲ ಇದರಿಂದ ಇವರುಗಳು ಸಹ ಖರೀದಿ ಕೇಂದ್ರ ಅಧಿಕಾರಿಯೊಂದಿಗೆ ಶಾಮೀಲಾಗಿರುವುದು ಸಾಬೀತಾಗಿದೆ ಇವರ ವಿರುದ್ದವೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

Ashika S

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

4 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

4 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

4 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

6 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

6 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

6 hours ago