ಮಹಾರಾಣಿ ಮಹಿಳಾ ವಿಜ್ಞಾನ, ಕಲಾ ಮತ್ತು ವಾಣಿಜ್ಯ ಕಾಲೇಜು ಜಂಟಿಯಾಗಿ ಎನ್ಇಪಿ ಕುರಿತು ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. 75 ವರ್ಷಗಳ ನಂತರ ನಮ್ಮ ದೇಶದಲ್ಲಿ ಜಾರಿಗೆ ಬಂದಿರುವ ಕ್ರಾಂತಿಕಾರಿ ಸುಧಾರಣೆ ಎಂದರೆ ಶಿಕ್ಷಣ ನೀತಿ ಮಾತ್ರ ಎಂದು ನಾನು ಘಂಟಾಘೋಷವಾಗಿ ಹೇಳಬಲ್ಲೆ. ರಾಷ್ಟ್ರ ನಿರ್ಮಾಣಕ್ಕೆ ಹಾಗೂ ಸಮಾಜವನ್ನು ಸಮಗ್ರವಾಗಿ ಮುಂದಕ್ಕೆ ತೆಗೆದುಕೊಂಡು ಹೋಗಲು ಇದು ಸಹಕಾರಿ. ಪ್ರಧಾನಿ ನರೇಂದ್ರ ಮೋದಿ ಬಹಳ ದೂರದೃಷ್ಟಿಯಿಂದ ಈ ನೀತಿಯನ್ನು ಜಾರಿಗೆ ತಂದಿದ್ದಾರೆ ಎಂದರು. ಕೆಲ ನಾಯಕರು ರಾಷ್ಟ್ರೀಯ ಶಿಕ್ಶಣ ನೀತಿಯ ಬಗ್ಗೆ ಜಿದ್ದಿಗೆ ಬಿದ್ದು ಟೀಕೆ ಮಾಡುತ್ತಿದ್ದಾರೆ. ಅವರು ಇಡೀ ನೀತಿಯನ್ನು ಓದಬೇಕು. ನಂತರ ತಪ್ಪಿದ್ದರೆ ತೋರಿಸಲಿ ಎಂದು ಸಚಿವರು ಅಭಿಪ್ರಾಯಪಟ್ಟರು.
ರಾಷ್ಟ್ರೀಯ ಶಿಕ್ಷಣ ನೀತಿ ಯಾರ ವಿರುದ್ಧವೂ ಅಲ್ಲ : ಅಶ್ವಥ್ ನಾರಾಯಣ
Photo Credit :
ಮೈಸೂರು: ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ) ಯಾರ ವಿರುದ್ಧವೂ ಅಲ್ಲ. ಇದು ಕೇವಲ ವಿದ್ಯಾರ್ಥಿಗಳ ಪರ ಮತ್ತು ರಾಷ್ಟ್ರದ ಪರ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.