Categories: ಮೈಸೂರು

ವರ್ಚ್ಯುವಲ್ ಮೂಲಕ ದಸರಾ ಜಂಬೂಸವಾರಿ ವೀಕ್ಷಣೆಗೆ ಅವಕಾಶ

ಮೈಸೂರು: ಕಳೆದ ಒಂಬತ್ತು ದಿನಗಳಿಂದ ನಡೆಯುತ್ತಿದ್ದ ಮೈಸೂರು ದಸರಾ ಜಂಬೂಸವಾರಿಯೊಂದಿಗೆ ಸಂಪನ್ನಗೊಳ್ಳಲಿದ್ದು, ಜಂಬೂಸವಾರಿ ಸಂಜೆ ನಡೆಯಲಿರುವ ಕಾರಣ ಈಗಾಗಲೇ ಸರ್ವ ರೀತಿಯಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಜಂಬೂಸವಾರಿ ಅರಮನೆ ಆವರಣದಲ್ಲಿ ನಡೆಯಲಿದ್ದು, ಈ ಸುಂದರ ಕ್ಷಣಗಳನ್ನು ತುಂಬಿಕೊಳ್ಳಲು ಕೇವಲ 500 ಮಂದಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. ಜತೆಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಅರಮನೆ ಸುತ್ತಲಿನ ರಸ್ತೆಗಳಲ್ಲಿ ಇಂದು(ಅ.15) ಬೆಳಗ್ಗೆ 7ಗಂಟೆಯಿಂದ ಸಂಜೆ 6ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ. ಅರಮನೆಗೆ ಪ್ರವೇಶ ಮಾಡುವ ದ್ವಾರಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಗಣ್ಯರು ಪ್ರವೇಶಿಸುವ ಕಡೆ ತಪಾಸಣೆ ಮಾಡಿ ಒಳಗೆ ಬಿಡಲಾಗುತ್ತಿದೆ. ಆಹ್ವಾನಿತರಿಗೆ ಮಾತ್ರ ಅರಮನೆ ಒಳಗೆ ಪ್ರವೇಶ ನೀಡಲಾಗಿದೆ. ಇಲ್ಲಿ ಒಟ್ಟು 500 ಮಂದಿಗೆ ಮಾತ್ರ ಅವಕಾಶವಿದ್ದು ಉಳಿದಂತೆ ಯಾರನ್ನೂ ಒಳಬಿಡಲಾಗುತ್ತಿಲ್ಲ. ಅರಮನೆಯ ಸುತ್ತಮುತ್ತಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದ್ದು, ಪೊಲೀಸರು ಹದ್ದಿನ ಕಣ್ಣಿಟ್ಟು ಕಾಯುತ್ತಿದ್ದಾರೆ.

ಪ್ರತಿ ವರ್ಷ ಜಂಬೂ ಸವಾರಿ ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ಸುಮಾರು ಐದು ಕಿ.ಮೀ. ದೂರ ಸಾಗುತ್ತಿತ್ತು. ಈ ವೇಳೆ ಸಾರ್ವಜನಿಕರು ರಸ್ತೆಯ ಇಕ್ಕೆಲಗಳಲ್ಲಿ ಕುಳಿತು ನಿಂತು ವೀಕ್ಷಿಸುತ್ತಿದ್ದರು. ಆದರೆ ಈ ಬಾರಿ ಅರಮನೆ ಆವರಣಕ್ಕಷ್ಟೆ ಸೀಮಿತವಾಗಿದೆ. ಹೀಗಾಗಿ ಜಂಬೂಸವಾರಿಯನ್ನು ಎಲ್ಲರೂ ತಾವಿದ್ದ ಕಡೆಯಿಂದಲೇ ವೀಕ್ಷಿಸಲು ಅನುಕೂಲವಾಗುವಂತೆ ವರ್ಚ್ಯುವಲ್ ಮೂಲಕ ಮೆರವಣಿಗೆಯನ್ನು ನೋಡಲು ಅವಕಾಶ ಮಾಡಿಕೊಡಲಾಗಿದೆ. ಮಾಧ್ಯಮಗಳು ಕೂಡ ಜಂಬೂಸವಾರಿಯ ನೇರಪ್ರಸಾರ ಮಾಡಲಿದ್ದು  ವರ್ಚ್ಯುವಲ್ ಮೂಲಕ ಮೆರವಣಿಗೆಯನ್ನು ನೋಡಲು ಬಯಸುವವರು ಲಿಂಕ್‍ ಗಳನ್ನು ಬಳಸಬಹುದಾಗಿದೆ

Swathi MG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

7 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

7 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

7 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

7 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

8 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

8 hours ago