ಮೈಸೂರು: ಇಲ್ಲಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರ ನಿವಾಸಕ್ಕೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗುರುವಾರ ಬೆಳಿಗ್ಗೆ ಭೇಟಿ ನೀಡಿದರು.
ಜಿ.ಟಿ.ದೇವೇಗೌಡ ಅವರ ಮೊಮ್ಮಗಳ ನಿಧನಕ್ಕೆ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ ಸಿಂಹ, ಶಾಸಕರಾದ ನಿರಂಜನ್, ಮಹೇಶ್ ಇದ್ದರು.