Categories: ಮೈಸೂರು

ಸಂಚುರೂಪಿಸಿ ಕೊಲೆ ಮಾಡಲಾಗಿದೆ: ಸಂಸದ ಪ್ರತಾಪ್ ಸಿಂಹ

ಮೈಸೂರು: ಆರ್ ಎಸ್ ಎಸ್ ಕಾರ್ಯಕರ್ತ ಮಾಗಳಿ ರವಿ ಅವರನ್ನು ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಅದು ಅಪಘಾತವಲ್ಲ ಎಂದು ಸಂಸದ ಪ್ರತಾಪ್ ಸಿಂಹ ಮೈಸೂರಿನಲ್ಲಿ ಆರೋಪ ಮಾಡಿದ್ದಾರೆ.

ಈ ಸಂಬಂಧ ಪ್ರಕರಣದ ಸತ್ಯಾಸತ್ಯತೆ ಹೊರತರುವಂತೆ ಪೊಲೀಸರು ಹಾಗೂ ಸರ್ಕಾರದ ಮೇಲೆ ಒತ್ತಡ ತರಲು ನವೆಂಬರ್ 7ರಂದು ಜಿಲ್ಲೆಯ ಪಿರಿಯಾಪಟ್ಟಣ, ಕೆ.ಆರ್.ನಗರ, ಹುಣಸೂರು ಮತ್ತು ಎಚ್.ಡಿ. ಕೋಟೆ ಬಂದ್ ಗೆ ಬಿಜೆಪಿ ಕರೆ ಕೊಡಲಾಗಿದೆ ಎಂದ ಸಂಸದರು ರವಿ ಅವರದ್ದು ಕೊಲೆ ಅನ್ನುವುದಕ್ಕೆ ಬಲವಾದ ಕಾರಣಗಳು ಲಭ್ಯವಾಗಿವೆ. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರೂ ಸಹ ಯಾವುದೋ ಬಲವಾದ ಆಯುಧದಿಂದ ತಲೆಗೆ ಹೊಡೆದ ನಂತರವೇ ಬೈಕ್ ನಿಂದ ಕೆಳಕ್ಕೆ ಬಿದ್ದಿರಬೇಕೆಂದು ಹೇಳಿದ್ದಾರೆ. ಈಗ ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ಕೊಂಡೊಯ್ದು ಅಂತ್ಯಸಂಸ್ಕಾರ ನೆರವೇರಿಸುತ್ತೇವೆ.

ಆದರೆ ಪೊಲೀಸರಿಂದ ನಮಗೆ ಸರಿಯಾದ ಭರವಸೆ ಸಿಗಬೇಕು. ಸರ್ಕಾರದ ಒತ್ತಡಕ್ಕೆ ಮಣಿದು ಪೊಲೀಸರು ಇದೊಂದು ಅಪಘಾತ ಅಂತಾ ಹೇಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕೆಲವು ಕೋಮು ಶಕ್ತಿಗಳಿಗೆ ಬಿಜೆಪಿ ಮುಖಂಡರೇ ಟಾರ್ಗೆಟ್ ಆಗುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಮುಖಂಡನ 11ನೇ ಹತ್ಯೆ ಇದಾಗಿದೆ. ಕೇರಳದಲ್ಲಿ ತಮ್ಮ ರಾಜಕೀಯ ವೈರಿಗಳನ್ನು ಮುಗಿಸುವಂತಹ ದ್ವೇಷದ ರಾಜಕಾರಣ ಕರ್ನಾಟಕಕ್ಕೂ ಕಾಲಿಟ್ಟಿದೆ.

ಘಟನೆ ಹಿಂದೆ ಪಿಎಫ್ಐ, ಎಸ್ಡಿಪಿಐನಂತಹ ಮತೀಯ ಶಕ್ತಿಯ ಕೈವಾಡ ಇರುವುದನ್ನು ಅಲ್ಲಗೆಳೆಯಲಾಗದು. ಸರ್ಕಾರಕ್ಕೆ ನಾನು ಕೊಡುವ ಎಚ್ಚರಿಕೆ ಏನೆಂದರೆ, ಟಿಪ್ಪು ಬಗ್ಗೆ ಧಾರಾವಾಹಿ ಮಾಡಲು ಹೊರಟ ನಿರ್ದೇಶಕ ಸಂಜಯ್ ಖಾನ್ 80 ಜನರ ಸಜೀವ ದಹನಕ್ಕೆ ಕಾರಣರಾದರು, ತಾವೂ ಬೆಂಕಿಯಲ್ಲಿ ಬೆಂದರು. ಅದೇ ರೀತಿ ಲಂಡನ್ ನಿಂದ ಟಿಪ್ಪು ಖಡ್ಗ ಖರೀದಿಸಿ ತಂದ ವಿಜಯ್ ಮಲ್ಯ ಬರ್ಬಾದ್ ಆಗಿದ್ದಾರೆ. ಇನ್ನು ಟಿಪ್ಪು ಜಯಂತಿ ಆಚರಿಸುತ್ತಿರುವ ಈ ಸರ್ಕಾರದ ಕಥೆ ಏನಾಗುತ್ತದೆ ಅನ್ನುವುದನ್ನು ಕಾದುನೋಡುತ್ತೇವೆ ಎಂದರು.

Desk

Recent Posts

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

9 mins ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

27 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

8 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

9 hours ago