ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ಅವರ ಪಾರ್ಥೀವ ಶರೀರದ ಅಂತ್ಯಸಂಸ್ಕಾರವನ್ನು ನಾಳೆ ಮಧ್ಯಾಹ್ನ ನೆರವೇರಿಸಲಾಗುವುದು ಎಂದು ಬಿಜೆಪಿ ನಾಯಕ ಆರ್. ಅಶೋಕ್ ಅವರು ತಿಳಿಸಿದ್ದಾರೆ. ಅನಂತ ಕುಮಾರ್ ಅವರ ಮನೆಯಲ್ಲೇ ಇಂದು ಪಾರ್ಥೀವ ಶರೀರದ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ನಾಳೆ ಬೆಳಿಗ್ಗೆ 8 ಗಂಟೆಗೆ ಬಿಜೆಪಿ ಕಚೇರಿಗೆ ಶರೀರವನ್ನು ತರಲಾಗುವುದು, 9 ಗಂಟೆಯ ವರೆಗೆ ದರ್ಶನಕ್ಕೆ ಇಡಿಸಲಾಗುತ್ತದೆ. 10 ಗಂಟೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. 12ಗಂಟೆಗೆ ನ್ಯಾಷನಲ್ ಕಾಲೇಜು ಮೈದಾನದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು.
ಮಧ್ಯಾಹ್ನ 1 ಗಂಟೆಗೆ ಚಾಮರಾಜಪೇಟೆ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದರು.