Categories: ಮೈಸೂರು

ಸಾಹಿತ್ಯ ಸಮ್ಮೇಳನದ ಸಿದ್ಧತೆಗೆ ವೇಗ ಮುಟ್ಟಿಸಲು ಜಿಲ್ಲಾಧಿಕಾರಿ ಸೂಚನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನವೆಂಬರ್ 24ರಿಂದ ನಡೆಯುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತಾ ಚಟುವಟಿಕೆಗಳನ್ನು ತ್ವರಿತಗೊಳಿಸಬೇಕು ಎಂದು ಎಲ್ಲಾ ಉಪ ಸಮಿತಿಗಳಿಗೆ ಜಿಲ್ಲಾಧಿಕಾರಿ ಡಿ.ರಂದೀಪ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ಅತ್ಯಂತ ಕಡಿಮೆ ಅವಧಿ ಇರುವುದರಿಂದ ಎಲ್ಲಾ ಸಮಿತಿಗಳು ತಮ್ಮ ಕೆಲಸ ಕಾರ್ಯ ಚುರುಕುಗೊಳಿಸಬೇಕು, ಸಭೆಯಲ್ಲಿ ವಿವಿಧ ಉಪ ಸಮಿತಿಗಳು ತಮ್ಮ ಅಂದಾಜು ವೆಚ್ಚದ ಪಟ್ಟಿಯನ್ನು ಅನುಮೋದನೆಗೆ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.

ಮೆರವಣಿಗೆ ಸಮಿತಿ 40 ಲಕ್ಷ ರೂ. ವೇದಿಕೆ ನಿರ್ವಹಣೆ ಸಮಿತಿ 15 ಲಕ್ಷ ರೂ. ಸಾಂಸ್ಕೃತಿಕ ಸಮಿತಿ 40 ಲಕ್ಷ ರೂ. ಅಲಂಕಾರ ಸಮಿತಿ 14 ಲಕ್ಷ ರೂ. ಸ್ವಚ್ಛತಾ ಸಮಿತಿ 25 ಲಕ್ಷ ರೂ. ಆರೋಗ್ಯ ಸಮಿತಿ 3 ಲಕ್ಷ ರೂ. ಸ್ವಯಂಸೇವಕರ ಸಮಿತಿ 8 ಲಕ್ಷ ರೂ. ಮಹಿಳಾ ಸಮಿತಿ 3 ಲಕ್ಷ ರೂ. ಸ್ಮರಣ ಸಂಚಿಕೆ ಸಮಿತಿ 6 ಲಕ್ಷ ರೂ. ಪ್ರಚಾರ ಸಮಿತಿ ಜಾಹೀರಾತಿಗೆ 50 ಲಕ್ಷ ರೂ ಹಾಗೂ ಇತರೆ ಪ್ರಚಾರ ಕಾರ್ಯಗಳಿಗೆ 40 ಲಕ್ಷ ರೂ.ಗಳ ಪ್ರಸ್ತಾವನೆ ಸಲ್ಲಿಸಿದರು.

ಸಾಂಸ್ಕೃತಿಕ ಸಮಿತಿ ಅಧ್ಯಕ್ಷರಾದ ಶಾಸಕ ಜಿ.ಟಿ. ದೇವೇಗೌಡ ಅವರು ಮಾತನಾಡಿ, ಹೆಸರಾಂತ ಗಾಯಕರು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಲಕ್ಷಾಂತರ ರೂ. ನೀಡುವ ಬದಲಿಗೆ, ದಸರಾ ಸಂದರ್ಭದಲ್ಲಿ ಉತ್ತಮ ಪ್ರದರ್ಶನ ನೀಡಿದ ಸ್ಥಳೀಯ ಕಲಾವಿದರೆ ಆದ್ಯತೆ ನೀಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು. ಮೈಸೂರಿನಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಯಾವುದೇ ಕಾರ್ಯಕ್ರಮದಲ್ಲಿ ಲೋಪ ಆಗಬಾರದು. ಮುಖ್ಯಮಂತ್ರಿಯವರ ಜಿಲ್ಲೆಯಾಗಿರುವುದರಿಂದ ಹೆಚ್ಚಿನ ಜಾಗೃತೆವಹಿಸಬೇಕು ಎಂದು ಹೇಳಿದರು.

ರಘು ದೀಕ್ಷಿತ್, ವಸುಂಧರ ದೊರೆಸ್ವಾಮಿ ಮುಂತಾದ ಹಲವಾರು ಕಲಾವಿದರು ಮೈಸೂರಿನವರು. ಈ ಕನ್ನಡ ಹಬ್ಬಕ್ಕೆ ಅಭಿಮಾನದಿಂದ ಕಡಿಮೆ ಸಂಭಾವನೆಯಲ್ಲಿ ಕಾರ್ಯಕ್ರಮ ನೀಡುವಂತೆ ಕೇಳಬಹುದು ಎಂದು ಶಾಸಕರಾದ ವಾಸು ಅವರು ತಿಳಿಸಿದರು.

ನ.24, 25 ಹಾಗೂ 26ರಂದು ಸಂಜೆ 6 ರಿಂದ 10ಗಂಟೆವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದ್ದು, ಕಲಾವಿದರನ್ನು ಬೇಗ ಅಂತಿಮಗೊಳಿಸಲು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಮ್ಮೇಳನಾಧ್ಯಕ್ಷರಾದ ಪ್ರೊ.ಚಂದ್ರಶೇಖರ ಪಾಟೀಲ ಅವರನ್ನು ಅಲಂಕೃತ ಸಾರೋಟಿನಲ್ಲಿ ಮೆರವಣಿಗೆಯಲ್ಲಿ ಬರಮಾಡಿಕೊಳ್ಳಲಾಗುವುದು. ಮೈಸೂರಿನಲ್ಲಿ ನಡೆಯುವ ಈ ಸಮ್ಮೇಳನದ ಮೆರವಣಿಗೆಯಲ್ಲಿ ಭುವನೇಶ್ವರಿ ದೇವಿಯನ್ನು ಆನೆ ಮೇಲೆ ಮೆರವಣಿಗೆ ಮಾಡಿಸಬೇಕು ನಿರ್ಧರಿಸಲಾಗಿದೆ ಎಂದರು.

Desk

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

2 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

3 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

3 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

3 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

3 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

4 hours ago