Categories: ಮೈಸೂರು

ಸಿದ್ದರಾಮಯ್ಯರಿಗೆ ದೃಷ್ಟಿದೋಷವಿದೆ: ಸಿ.ಟಿ.ರವಿ

ಮೈಸೂರು: ಸುಖಾ ಸುಮ್ಮನೆ ಆರೆಸ್ಸೆಸ್ ಬಗ್ಗೆ ಮಾತನಾಡುವ ನಿಮಗೆ ದೃಷ್ಟಿ ದೋಷವಿದೆ. ಜತೆಗೆ ವಯಸ್ಸಾಗುತ್ತಿರುವುದರಿಂದ ಚಿಕಿತ್ಸೆಯ ಅಗತ್ಯವಿದೆ ಎಂದು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಾವ ಆಧಾರದ ಮೇಲೆ ಆರೆಸ್ಸೆಸ್‌ನನ್ನು ಭಯೋತ್ಪಾದಕ ಸಂಘಟನೆ ಎಂದು ಅಪಪ್ರಚಾರ ಮಾಡುತ್ತಿದ್ದೀರಿ? ಎಂದು ಪ್ರಶ್ನಿಸಿದ ಅವರು ನೂರಾರು ಶಿಕ್ಷಣ ಸಂಸ್ಥೆಗಳನ್ನು ತೆರೆದು ಶುಲ್ಕವಿಲ್ಲದೇ, ಯಾವುದೇ ಆದಾಯ ನಿರೀಕ್ಷಿಸದೇ ಸಹಸ್ರಾರು ಮಕ್ಕಳಿಗೆ ಆರೆಸ್ಸೆಸ್ ಶಿಕ್ಷಣ ನೀಡುತ್ತಿದೆ. ಸಿದ್ದರಾಮಯ್ಯನವರಿಗೆ  ದೃಷ್ಟಿದೋಷ ಇರುವುದರಿಂದ ಇದೆಲ್ಲ ಕಾಣುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಡೀ ದೇಶದ ಜನತೆಗೆ ಆರೆಸ್ಸೆಸ್ ದೇಶ ಭಕ್ತ ಸಂಘಟನೆ ಎಂಬುದು ತಿಳಿದಿದೆ. ಹೀಗಾಗಿ ಜನತೆಗೆ ಆರೆಸ್ಸೆಸ್ ಏನು ಎಂಬುದರ ಬಗ್ಗೆ ಸಿದ್ದರಾಮಯ್ಯ ಅವರ ಸರ್ಟಿಫಿಕೆಟ್ ಅಗತ್ಯವಿಲ್ಲ. ಸಿದ್ದರಾಮಯ್ಯ ಅವರು ಈಗಲಾದರೂ ಸುಳ್ಳು ಹೇಳುವುದನ್ನು ಬಿಡಬೇಕು. ಮುಂದಿನ ದಿನಗಳಲ್ಲಿ ತಮ್ಮ ತಪ್ಪಿನ ಅರಿವಾಗಿ, ಆರೆಸ್ಸೆಸ್‌ನ್ನು ಪ್ರಶಂಸಿಸುವ ಕಾಲ ದೂರವಿಲ್ಲ ಎಂದು ತಿರುಗೇಟು ನೀಡಿದರು.

ನಮಗೆ ಆರೆಸ್ಸೆಸ್ ಮಾತೃ ಸಂಸ್ಥೆ. ನಮಗೂ ಮತ್ತು ಆ ಸಂಘಟನೆಗೂ ತಾಯಿ ಮಗುವಿನ ಸಂಬಂಧ ಇದ್ದಂತೆ. ಆದರೆ ಟಿಪ್ಪು ಕನ್ನಡ ವಿರೋಧಿ, ಮೇಲುಕೋಟೆಯಲ್ಲಿ ನರಮೇಧ ಮಾಡಿದ, ಶ್ರೀರಂಗಪಟ್ಟಣದಲ್ಲಿ ದೇಗುಲವನ್ನು ಮಸೀದಿಯಾಗಿ ಪರಿರ್ತಿಸಿದ ಎಂದರೆ ಉರಿದು ಬೀಳುವ ಸಿದ್ದರಾಮಯ್ಯನವರೆ ನಿಮಗೂ ಟಿಪ್ಪುವಿಗೂ ಏನು ಸಂಬಂಧ, ಮುಚ್ಚಿಟ್ಟುಕೊಂಡಿರುವ ಆ ಸಂಬಂಧ ಯಾವುದು ಎಂದು ಪ್ರಶ್ನಿಸಿದರು.

 ದೇಶದ ವಿರುದ್ಧ ಇಲ್ಲಿರುವ ದಲಿತರನ್ನು ಎತ್ತಿಕಟ್ಟುವ ಹುನ್ನಾರ ನಡೆಯುತ್ತಿದೆ. ಈ ಬಗ್ಗೆ ದಲಿತರು ಎಚ್ಚೆತ್ತುಕೊಳ್ಳಬೇಕು. ಡಾ.ಬಿ.ಆರ್.ಅಂಬೇಡ್ಕರ್ ಸಮಕಾಲೀನರಾದ ದಲಿತ ಮುಖಂಡ ಜೋಗೇಂದ್ರ ನಾಥ ಮಂಡಲ್, ಮಹಮ್ಮದ್ ಅಲಿ ಜಿನ್ನಾ ಮಾತು ನಂಬಿ ಪಾಕಿಸ್ತಾನಕ್ಕೆ ಹೋಗುತ್ತಾರೆ. ಆ ಬಳಿಕ ಅಲ್ಲಿನ ಅಸಹಿಷ್ಣುತೆ, ಹಿಂಸೆ ತಾಳಲಾರದೆ 5 ವರ್ಷಗಳಲ್ಲಿ ನಿರಾಶ್ರಿತರಾಗಿ ಭಾರತಕ್ಕೆ ವಾಪಾಸ್ ಬರುತ್ತಾರೆ. ಇದನ್ನು ಎಲ್ಲರೂ ತಿಳಿಯಬೇಕು ಎಂದರು.

Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

2 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

3 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 hours ago