ಮೈಸೂರು: ಸುಳ್ವಾಡಿ ವಿಷ ಪ್ರಸಾದ ಸೇವನೆ ಪ್ರಕರಣದಲ್ಲಿ ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ಕಳೆದ 9 ದಿನಗಳಿಂದ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಾಮರಾಜನಗರದ ಹನೂರು ತಾಲ್ಲೂಕಿನ ಮಲೇಮಹದೇಶ್ವರ ಬೆಟ್ಟದ ರಂಗನ್ ಅವರು ಶನಿವಾರ ಮೃತಪಟ್ಟಿದ್ದಾರೆ.
ಮೃತರ ಪತ್ನಿ ಹಾಗೂ ಮಗಳು ಸಹ ಮೈಸೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಸ್ತುತ ವಿಷ ಪ್ರಸಾದ ಸೇವನೆ ಪ್ರಕರಣದಲ್ಲಿ 10 ಮಂದಿ ಮೈಸೂರಿನ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.