Categories: ಮೈಸೂರು

ಸೆರೆ ಸಿಕ್ಕ ಮೊಸೆಳೆ: ಸಾರ್ವಜನಿಕರ ಆತಂಕ ದೂರ

ಶ್ರೀರಂಗಪಟ್ಟಣ : ಹಲವು ತಿಂಗಳುಗಳಿಂದ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುವುದಲ್ಲೇ, ಪ್ರವಾಸಿಗರು ಹಾಗೂ ಸಾರ್ವಜನಿಕರನ್ನು ಭಯಬೀತರನ್ನಾಗಿಸಿದ್ದ ಮೊಸೆಳೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ತಾಲೂಕಿನ ವಿಶ್ವ ವಿಖ್ಯಾತ ರಂಗನತಿಟ್ಟು ಪಕ್ಷಿದಾಮದ ಹಾಸು ಪಾಸಿನಲ್ಲಿ ಹಲವು ತಿಂಗಳುಗಳಿಂದ ಸಾರ್ವಜನಿಕವಾಗಿ ರಸ್ತೆ ಹಾಗೂ ಜಮೀನುಗಳಲ್ಲಿ ಕಾಣಿಸಿಕೊಂಡು ರೈತರ ಸಾಕು ಪ್ರಾಣಿ ಕುರಿ, ಮೇಕೆ ಸೇರಿದಂತೆ ಇತರೆ ಪ್ರಾಣಿಗಳನ್ನು ತಿಂದು ಹಾಕಿ ರೈತರ ಸಂಕಷ್ಟಕ್ಕೆ ಕಾರಣವಾಗಿತ್ತು, ಈ ಸಂಬಂಧ ರೈತರು ಹಲವು ಭಾರಿ ಮೊಸಳೆ ಸೆರೆ ಹಿಡಿಯುವಂತೆ ಮನವಿ ಮಾಡಿದ್ದರು.

ಅಲ್ಲದೇ ಸಂಜೆ ವೇಳೆ ರಂಗನತಿಟ್ಟು ಪಕ್ಷಿಧಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮೇಲೆ ನಿತ್ಯ ಕಾಣಿಸಿಕೊಳ್ಳುತ್ತಿರುವುದರನ್ನು ಪ್ರವಾಸಿಗರ ಪೋಟೊ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ವೈರಲ್ ಸಹ ಆಗಿತ್ತು.

ಅಧಿಕಾರಿಗಳು ಮೊಸಳೆ ಸೆರೆಹಿಡಿಯುವ ಸಲುವಾಗಿ ಬೋನ್ ಇಟ್ಟು, ಕಾರ್ಯಪ್ರೌವೃತ್ತರಾಗಿದ್ದರು. ಸೋಮವಾರ ಸಂಜೆ ಸ್ಥಳೀಯ ರೈತರ ಮಾಹಿತಿ ಮೇರೆಗೆ ವಲಯ ಅರಣ್ಯಾಧಿಕಾರಿ ಕೆ. ಸುರೇಂದ್ರ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಬಲೆ ಸೇರಿದಂತೆ ಇತರೆ ಸಲಕರೆಗಳೊಂದಿಗೆ ಸುಮಾರು 35 ರಿಂದ 40 ವರ್ಷದ, 7.6 ಅಡಿ ಉದ್ದದ, ಬೃಹದಾಕಾರದ ಮೊಸಳೆಯನ್ನು ಸೆರೆಹಿಡಿಯುವ ಮೂಲಕ ರೈತರು ಹಾಗೂ ಸಾರ್ವಜನಿಕರ ಆತಂಕವನ್ನು ಅರಣ್ಯ ಇಲಾಖೆ ಸಿಬ್ಬಂದಿ ದೂರಮಾಡಿದ್ದಾರೆ.

ವಲಯ ಅರಣ್ಯಾಧಿಕಾರಿ ಕೆ. ಸುರೇಂದ್ರ ಪ್ರತಿಕ್ರಿಯಿಸಿ, ಬಂಡಿಪುರ ಅರಣ್ಯ ಇಲಾಖೆ ಪಶು ವೈದ್ಯಾಧಿಕಾರಿ ವಸೀಮ್‌ಮಿರ್ಜಾ ಅವರಿಂದ ಮೊಸಳೆ ಆರೋಗ್ಯವಾಗಿರುವುದನ್ನ ಖಚಿತಪಡಿಸಿಕೊಳ್ಳಲಾಗಿದೆ. ಈ ಮೊಸಳೆ ಈಗಾಗಲೇ ಸಾರ್ವಜನಿವಾಗಿ ಓಡಾಡಿ ಸಾಕು ಪ್ರಾಣಿಗಳನ್ನು ಕೊಂದು ಹಾಕಿ ಆತಂಕ ವೃಷ್ಠಿಸಿದ್ದು, ಮತ್ತೆ ಇದೇ ಆಸು ಪಾಸಿನ ಸ್ಥಳಗಳಲ್ಲಿ ಬಿಡದೇ, ಮೇಲಧಿಕಾರಿಗಳ ಅನುಮತಿ ಮೇರೆಗೆ ನಿರ್ಜನ ಪ್ರದೇಶವಾದ ಹೆಚ್.ಡಿ ಕೋಟೆ ಬಳಿಯ ಕಬನಿ ಜಲಾಶಯದ ಹಿನ್ನೀರಿಗೆ ಬಿಡಲಾಗುವುದು ಎಂದು ತಿಳಿಸಿದ್ದಾರೆ.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

4 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

4 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

5 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

5 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

6 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

7 hours ago