ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಜಿಲ್ಲಾಡಳಿತ ಹಾಗೂ ಯೋಗ ಸಮಿತಿಯಿಂದ ಮೈಸೂರಿನ ಅರಮನೆ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.
ಯೋಗ ಶಿಕ್ಷಕರುಗಳಿಂದ ಯೋಗ ಪ್ರದರ್ಶನ ನಡೆಯಿತು. ಯೋಗಾಸನದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ವಿವಿಧ ಸಂಘ ಸಂಸ್ಥೆ ಸದಸ್ಯರು ಭಾಗಿಯಾಗಿದ್ದರು. ವಯಸ್ಸಿನ ಅಂತರವಿಲ್ಲದೆ ಉತ್ಸಾಹದಿಂದ ಯೋಗ ಪಟುಗಳು ಭಾಗವಹಿಸಿದರು.

ವಿದೇಶಿ ಪ್ರಜೆಗಳಿಂದಲೂ ಯೋಗ ಪ್ರದರ್ಶನ ನಡೆಯಿತು. ಯೋಗಾಸನದಲ್ಲಿ ಸಂಸದ ಯದುವೀರ್, ಶಾಸಕ ಶ್ರೀವತ್ಸ ಭಾಗಿಯಾಗಿದ್ದರು. ದೀಪ ಬೆಳಗುವ ಮೂಲಕ ಅಂತರಾಷ್ಟ್ರೀಯ ಯೋಗಾ ದಿನಾಚರಣೆಯನ್ನು ಸಚಿವ ಹೆಚ್ ಸಿ ಮಹದೇವಪ್ಪ ಉದ್ಘಾಟನೆ ಮಾಡಿದರು.
ಈ ವೇಳೆ ಸಂಸದ ಯದುವೀರ್, ಶಾಸಕ ಶ್ರೀವತ್ಸ, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಜಿಪಂ ಸಿಇಒ ಯುಕೇಶ್ ಕುಮಾರ್, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಎಸ್ಪಿ ವಿಷ್ಣುವರ್ಧನ್, ಅಪರ ಜೆಲ್ಲಾಧಿಕಾರಿ ಶಿವರಾಜು, ಪಾಲಿಕೆ ಆಯುಕ್ತ ಶೇಖ್ ತನ್ವಿರ್ ಆಸೀಫ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

