News Karnataka Kannada
Wednesday, May 01 2024
ಮೈಸೂರು

ಎಕ್ಸ್‌ಪ್ರೆಸ್ ವೇ ನಲ್ಲಿ 25 ಅಪಘಾತ ವಲಯ: ಅಲೋಕ್ ಕುಮಾರ್

25 accident zones on expressway: Alok Kumar
Photo Credit : By Author

ಮೈಸೂರು: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ 25 ಅಪಘಾತ ವಲಯಗಳಿದ್ದು, ಎಲ್ಲಾ ಕಡೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ ಎಂದು ರಾಜ್ಯ ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.

ಮೈಸೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಯಾಣಿಕರ ಹಿತ ದೃಷ್ಟಿಯಿಂದ ಸಾಕಷ್ಟು ಕಾಮಗಾರಿಗಳು ಬಾಕಿ ಇದ್ದು ಅವುಗಳನ್ನು ಪೂರ್ಣಗೊಳಿಸಬೇಕಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಪೊಲೀಸರನ್ನು ಕೇಳಿ ಕಾಮಗಾರಿ ನಡೆಸಿಲ್ಲ. ಈಗ ಸಮಸ್ಯೆಯಾದಾಗ ಸರಿ ಮಾಡಿ ಎಂದು ನಮ್ಮನ್ನು ಕೇಳುತ್ತಿದ್ದಾರೆ. ಕಾಮಗಾರಿ ಪೂರ್ಣಗೊಳಿಸದೇ ಉದ್ಘಾಟನೆ ಮಾಡಲಾಗಿದೆ ಎಂದು ಹೇಳಿದರು.

ಬಾಕಿ ಕಾಮಗಾರಿಗಳಿಗೆ ಹೆಚ್ಚುವರಿ ಅನುದಾನ ತಂದು ಕೆಲಸ ಮಾಡಿಸುವುದು ಎನ್‌ಎಚ್‌ಎಐ ಅಧಿಕಾರಿಗಳ ಕೆಲಸ. ಸರಕಾರದ ನಿಯಮಗಳ ಪ್ರಕಾರ ಪ್ರಸ್ತಾವನೆ, ಟೆಂಡರ್ ಮಾಡಿ ಕೆಲಸ ಮಾಡಿಸಬೇಕಿದ್ದು, ಇದಕ್ಕಾಗಿ ತಡವಾಗಬಹುದು ಎಂದು ಹೇಳಿದರು.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಚಾರವನ್ನು ಸಮರ್ಥಿಸಿಕೊಂಡ ಎಡಿಜಿಪಿ, ಎಕ್ಸ್‌ಪ್ರೆಸ್ ಹೆದ್ದಾರಿಯ ಅಪಘಾತದಲ್ಲಿ ಮೃತಪಟ್ಟ ಬಹುತೇಕರು ಬೈಕ್ ಸವಾರರು. 150 ಸಿಸಿ ವಾಹನಗಳಲ್ಲಿ ಹೆಚ್ಚು ವೇಗದಲ್ಲಿ ಹೋಗಲು ಸಾಧ್ಯವಿಲ್ಲ. ಆಟೋ ರಿಕ್ಷಾದಂತಹ ವಾಹನಗಳ ವೇಗ ಇನ್ನೂ ಕಡಿಮೆ ಇರುತ್ತದೆ. ಎತ್ತಿನಗಾಡಿ, ಕುದುರೆಗಾಡಿಯಂತಹ ಮೋಟಾರ್ ರಹಿತ ವಾಹನಗಳನ್ನು ಬಿಡಲು ಸಾಧ್ಯವೇ ಇಲ್ಲವೆಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಹಿಂದೆಯೇ ಆದೇಶ ಹೊರಡಿಸಿದೆ. ಹೆದ್ದಾರಿಯಲ್ಲಿ ದ್ವಿಚಕ್ರ ವಾಹನ ಸಂಚಾರ ನಿರ್ಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಈ ಸಂಬಂಧ ಜು.12ರಂದು ನೋಟಿಫಿಕೇಷನ್ ಕೂಡ ಆಗಿದೆ. ಆಗಸ್ಟ್ 1ರಿಂದ ನಿಯಮ ಜಾರಿಗೆ ಬರಲಿದೆ ಎಂದರು.

ಹೆದ್ದಾರಿಯಲ್ಲಿ ಗ್ರಿಲ್, ವಿದ್ಯುತ್ ಕಂಬಗಳ ಕಳ್ಳತನ ವಿಚಾರವಾಗಿ ಪ್ರಾಧಿಕಾರದಿಂದ ಯಾವುದೇ ದೂರು ಬಂದಿಲ್ಲ. ಈಗ ತಡೆಗೋಡೆ ಕಬ್ಬಿಣ ಕಳ್ಳತನದಿಂದ ಹಸು, ಪಾದಚಾರಿಗಳು ರಸ್ತೆಗೆ ಬರುತ್ತಿದ್ದಾರೆ. ಇದರಿಂದಾಗಿ ಅಪಘಾತ ಆಗುತ್ತಿವೆ ಎಂದು ಹೇಳುತ್ತಾರೆ. ಆದರೆ ಪೊಲೀಸರಿಗೆ ದೂರು ಕೊಟ್ಟಿಲ್ಲ. ದರೋಡೆ ಪ್ರಕರಣಗಳ ವಿಚಾರವನ್ನೂ ನಮ್ಮ ಗಮನಕ್ಕೆ ತಂದಿಲ್ಲ. ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು