ಮೈಸೂರು : ಮುಡಾ ಹಗರಣ ಸಂಬಂಧ ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ 4 ತಂಡಗಳ ರಚನೆ ಮಾಡಲಾಗಿದೆ. ಲೋಕಾಯುಕ್ತ ಎಸ್ ಪಿ ಉದೇಶ, ಡಿವೈಎಸ್ಪಿಎಸ್ ಮಾಲತೀಶ್, ಚಾಮರಾಜನಗರ ಡಿ ವೈ ಎಸ್ ಪಿ ಮ್ಯಾಥ್ಯು ಥಾಮಸ್ ಹಾಗೂ ಇನ್ಸ್ಪೆಕ್ಟರ್ ಸೇರಿದಂತೆ 4 ತಂಡಗಳನ್ನು ರಚನೆ ಮಾಡಲಾಗಿದೆ.
ಈ ವೇಳೆ ಲೋಕಾಯುಕ್ತ ಎಸ್ ಪಿ ಉದೇಶ ಎಲ್ಲಾ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಓದಿಕೊಂಡು ಇದೀಗ ತಂಡಗಳು ಪಾಯಿಂಟ್ಸ್ ಮಾಡಿಕೊಳ್ಳುತ್ತಿದ್ದಾರೆ. ಕೇಸಿನ ದಾಖಲೆಗಳ ಪರಿಶೀಲನೆ ನಡೆಸಿದ ಅಧಿಕಾರಿಗಳ ತಂಡ, ಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.
Ad