ಮೈಸೂರು : ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಹುಣಸೂರು ತಾಲ್ಲೂಕು ಗೌಡನಕಟ್ಟೆ ಬಳಿ ಮರಿ ಹುಲಿಗಳು ಸೆರೆ ಸಿಕ್ಕಿದ್ದವು.  ನಾಲ್ಕು ಹುಲಿಮರಿಗಳು ಸಾವನ್ನಪ್ಪಿದೆ.

ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿದ್ದ ಹುಲಿ ಮರಿಗಳು ಇರಿಸಲಾಗಿತ್ತು. ನಾಲ್ಕು ದಿನಗಳ ಅಂತರದಲ್ಲಿ ಸಾವನ್ನಪ್ಪಿವೆ. ಹುಲಿ ಮರಿಗಳ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಗೌಡನಕಟ್ಟೆಯ ಪ್ರಕಾಶ್‌ ಎಂಬುವರ ಜೋಳದ ಹೊಲದಲ್ಲಿ ನ.28ರಂದು ನಾಲ್ಕು ಮರಿಗಳೊಂದಿಗೆ  ತಾಯಿ ಹುಲಿ  ಕಾಣಿಸಿಕೊಂಡಿತ್ತು. ಮದ್ಯರಾತ್ರಿ ತಾಯಿ ಹುಲಿ ಸೆರೆಯಾಗಿತ್ತು.

ಎರಡು ದಿನಗಳ ನಂತರ ನ.30ರಂದು ನಾಲ್ಕು ಹುಲಿ ಮರಿಗಳು ಪತ್ತೆಯಾಗಿದ್ದವು. ಹುಲಿ ಮರಿಗಳು ಸೆರೆ ಹಿಡಿಯುವ ವೇಳೆ ಜನರ ಕಿರುಚಾಟದಿಂದ ಗಾಬರಿಯಾಗಿದ್ದವು. ಎರಡು ದಿನ ತಾಯಿಯಿಂದ ದೂರವಾಗಿದ್ದ ಮರಿಗಳು. ಆಹಾರವಿಲ್ಲದೆ ಬಳಲಿದ್ದವು. ಜನರ ಕೂಗಾಟದಿಂದ ಅತ್ತಿಂದಿತ್ತ ಓಡಾಡಿ ಸೆರೆ ಹಿಡಿಯುವ ವೇಳೆ ನಿತ್ರಾಣಗೊಂಡಿದ್ದವು.

ತಕ್ಷಣವೇ ಸೂಕ್ತ ಚಿಕಿತ್ಸೆಗಾಗಿ ಪುನರ್ವಸತಿ ಕೇಂದ್ರಕ್ಕೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಗಾಬರಿಗೊಳಗಾಗಿದ್ದ ಮರಿಗಳು ಸರಿಯಾಗಿ ಆಹಾರ ಸೇವಿಸುತ್ತಿರಲಿಲ್ಲಾ. ಅಸ್ವಸ್ಥಗೊಂಡಿದ್ದ ಹುಲಿ ಮರಿಗಳು ಸಾವನ್ನಪ್ಪಿವೆ. ಪಶುವೈದ್ಯರು ಸಾವನ್ನಪ್ಪಿರುವ ಹುಲಿ ಮರಿಗಳ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ನ.29 ಹಾಗೂ 30ರಂದು ಸೆರೆ ಸಿಕ್ಕಿದ್ದ  ನಾಲ್ಕು ಹುಲಿ ಮರಿಗಳು ಸಾವನ್ನಪ್ಪಿವೆ.

ಆದರೆ ತಾಯಿ ಹುಲಿ ಆರೋಗ್ಯದಿಂದಿದೆ. ಹುಲಿಮರಿಗಳ ಅಂಗಾಗಗಳನ್ನು ಪರೀಕ್ಷೆಗಾಗಿ  ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ. ಹುಲಿ ಮರಿಗಳ ಸಾವಿನ ಬಗ್ಗೆ ಯಾರಿಗೂ  ಅರಣ್ಯ ಇಲಾಖೆ ಮಾಹಿತಿ ನೀಡಲಿಲ್ಲ. ನೆನ್ನೆಯಿಂದ ಇಲಾಖೆಯ ಅಧಿಕಾರಿಗಳು ದೂರವಾಣಿ ಕರೆ ಸ್ವೀಕರಿಸುತಿಲ್ಲ.