ತಿ. ನರಸೀಪುರ: ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಪ್ರಯಾಣಿಸಿದ್ದು, ಟಿ ನರಸೀಪುರ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ ಮಾಡಲಾಯಿತು.
ಸಂಭ್ರಮಾಚರಣೆಯಲ್ಲಿ ಸಂಸದ ಸುನಿಲ್ ಬೋಸ್ ಭಾಗಿಯಾದರು. ಗ್ಯಾರಂಟಿ ಯೋಜನೆಗಳನ್ನ ವಿಪಕ್ಷಗಳು ಟೀಕೆ ಮಾಡ್ತಿದ್ದು, ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗಿದೆ ಅಂತ ಆರೋಪ ಮಾಡಿದರು.
ರಾಜ್ಯ ಸರ್ಕಾರ ಗ್ಯಾರಂಟಿ ಜೊತೆಗೆ ಅಭಿವೃದ್ಧಿಯನ್ನು ಕೂಡ ಮಾಡ್ತಿದೆ. ಶಕ್ತಿ ಯೋಜನೆಯಲ್ಲಿ 500ಕೋಟಿ ಮಹಿಳೆಯರು ಸಂಚಾರ ಮಾಡಿದ್ದಾರೆ. ರಾಜ್ಯ ಸರ್ಕಾರವನ್ನ ಟೀಕೆ ಮಾಡ್ತಿದ್ದ ವಿಪಕ್ಷಗಳಿಗೆ ಅಭಿವೃದ್ಧಿ ಮೂಲಕ ಉತ್ತರ ಕೊಡ್ತಿದ್ದೇವೆ. ಮುಂದಿನ ದಿನಗಳಲ್ಲೂ ರಾಜ್ಯದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ದವಾಗಿರುತ್ತದೆ ಎಂದು ಟಿ ನರಸೀಪುರದಲ್ಲಿ ಸಂಸದ ಸುನಿಲ್ ಬೋಸ್ ಹೇಳಿಕೆ ನೀಡಿದ್ದಾರೆ.

