ಮೈಸೂರು

75 ಪಾರಂಪರಿಕ ತಾಣಗಳಲ್ಲಿ ಯೋಗ ದಿನಾಚರಣೆ

ಮೈಸೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದ 75 ಪಾರಂಪರಿಕ ತಾಣಗಳಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯದ 5 ತಾಣಗಳಾದ ಮೈಸೂರು, ಹಳೇಬೀಡು, ಹಂಪಿ, ಪಟ್ಟದಕಲ್ಲು ಹಾಗೂ ವಿಜಯಪುರದ ಗೋಲಗುಂಬಜ್ ಈ  ಕಾರ್ಯಕ್ರಮಕ್ಕೆ ಆಯ್ಕೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿನಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಹಳೇಬೀಡಿನಲ್ಲಿ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಹಂಪಿಯಲ್ಲಿ ಕಲ್ಲಿದ್ದಲು ಖಾತೆ ಸಚಿವ ಪ್ರಲ್ಹಾದ ಜೋಷಿ, ಪಟ್ಟದಕಲ್ಲಿನಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹಾಗೂ ವಿಜಯಪುರದ ಗೋಲಗುಂಬಜ್ ಲ್ಲಿ ನವೀಕರಿಸಬಹುದಾದ ಇಂಧನ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಪಾಲ್ಗೊಳ್ಳಲಿದ್ದಾರೆ. ಇದಲ್ಲದೆ  ರಾಜ್ಯ ಮಟ್ಟದಲ್ಲಿ ರಾಜ್ಯದ 75 ಐತಿಹಾಸಿಕ ಸ್ಥಳಗಳಲ್ಲಿ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಮೈಸೂರಿನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ  ಭಾಗವಹಿಸಲಿದ್ದು, ಮೈಸೂರು ಅರಮನೆವ ಎದುರು 15 ಸಾವಿರ ಜನರು ಯೋಗ ಮಾಡಲಿದ್ದಾರೆ. ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಯೋಗಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಜೂನ್ 13ರೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು. ಈ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಧಾನ ಮಂತ್ರಿಗಳ ಕಚೇರಿ ಸೂಚಿಸಿದಂತೆ ಸಮಾಜದ ಎಲ್ಲ ವರ್ಗಗಳ ಜನರನ್ನೂ ಸೇರ್ಪಡೆಗೊಳಿಸುವಂತೆ ತಿಳಿಸಿದರು.

ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಸಾರಿಗೆ ಸೌಲಭ್ಯ, ಲಘು ಉಪಾಹಾರ ಕುಡಿಯುವ ನೀರು ಮತ್ತಿತರ ವ್ಯವಸ್ಥೆಗಳನ್ನು ಯಾವುದೇ ಲೋಪವಿಲ್ಲದಂತೆ ನಿರ್ವಹಿಸಬೇಕು. ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಸಮನ್ವಯ ವಹಿಸುವಂತೆ ಸೂಚಿಸಿದರು.

ಸಭೆಯಲ್ಲಿ ಸಚಿವರಾದ ಡಾ.ಕೆ.ಸುಧಾಕರ್, ಎಸ್.ಟಿ.ಸೋಮಶೇಖರ್, ನಾರಾಯಣಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ  ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್, ಯೋಜನೆ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Ashika S

Recent Posts

40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ: ಡಿ.ಕೆ.ಶಿವಕುಮಾರ್

ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…

2 mins ago

ಕೇಜ್ರಿವಾಲ್ ನಿವಾಸದಲ್ಲಿ ಸ್ವಾತಿ ಮಲಿವಾಲ್ ಜಗಳದ ವಿಡಿಯೊ ತುಣುಕು ವೈರಲ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್‌ನಲ್ಲಿರುವ ದೆಹಲಿ…

12 mins ago

ಕೇಜ್ರಿವಾಲ್‌ ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಜೊತೆ ತಿರುಗಾಟ: ನಿರ್ಮಲಾ ಸೀತಾರಾಮನ್‌

ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ…

13 mins ago

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

36 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

46 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

51 mins ago