News Karnataka Kannada
Tuesday, April 30 2024
ಮೈಸೂರು

ತಲೆಗೆ ಗಾಯವಾಗಿ ಅಸ್ವಸ್ಥಗೊಂಡಿದ್ದ ಮರಿ ಗಂಡಾನೆ ಸಾವು

A baby male who fell ill due to head injury dies after failing to respond to treatment
Photo Credit : News Kannada

ಗುಂಡ್ಲುಪೇಟೆ: ತಲೆಗೆ ಗಾಯವಾಗಿ ಅಸ್ವಸ್ಥಗೊಂಡಿದ್ದ ಮರಿ ಗಂಡಾನೆಯೊಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕರೆ ವಲಯ ವ್ಯಾಪ್ತಿಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಉಪ ವಿಭಾಗದ ಕುಂದಕರೆ ವಲಯ ವ್ಯಾಪ್ತಿಯ ಹೊನ್ನೆಮರದ ತಿಟ್ಟಿನಿಂದ ಡೊಂಕಿದಾರಿ ಡಿ ಲೈನ್‍ನ ಆಲದಮರದ ತಿರುವಿನಲ್ಲಿ ಆ.24 ರಂದು ಸುಮಾರು 3 ರಿಂದ 4 ವರ್ಷದ ಗಂಡಾನೆ ಮರಿಯೊಂದು ಅಸ್ವಸ್ಥಗೊಂಡು ನಿತ್ರಾಣದಿಂದ ಜಾನುವಾರು ತಡೆ ಕಂದಕದ ಬಳಿ ನಿಂತಿದ್ದನ್ನ ಗಮನಿಸಿದ ಸಿಬ್ಬಂದಿ ಮತ್ತು ವಲಯ ಅರಣ್ಯಾಧಿಕಾರಿ ದೀಪಾ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ರವೀಂದ್ರ ಗಮನಕ್ಕೆ ತಂದಿದ್ದಾರೆ.

ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ಅರಣ್ಯಾಧಿಕಾರಿಗಳು ಅಸ್ವಸ್ಥತೆಯಿಂದ ನಿತ್ರಾಣಗೊಂಡು ಕಂದಕದಲ್ಲಿ ನಿಂತಿದ್ದ ಗಂಡು ಮರಿಯಾನೆ ತಲೆಗೆ ಗಾಯವಾಗಿರುವುದನ್ನು ಗಮನಿಸಿ ಇಲಾಖಾ ಪಶು ವೈದ್ಯಾಧಿಕಾರಿ ಡಾ.ಮಿರ್ಜಾ ವಾಸೀಂ ಅವರನ್ನು ಬರಮಾಡಿಕೊಂಡು ಚಿಕಿತ್ಸೆ ಕೊಡಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟು, ಆನೆಯ ಚಲನವಲನದ ಮೇಲೆ ನಿಗಾ ವಹಿಸಿ ಗಮನಿಸುವಂತೆ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿತ್ತು. ನಂತರ ಆ.27ರಂದು ಮತ್ತೆ ಕಂದಕಕ್ಕೆ ಇಳಿದು ನಿತ್ರಾಣಗೊಂಡಿದ್ದ ಮರಿ ಆನೆಗೆ ಇಲಾಖಾ ಪಶು ವೈದ್ಯಾಧಿಕಾರಿ ಚಿಕಿತ್ಸೆ ಕೊಟ್ಟು ಕಬ್ಬು, ಬಾಳೆ, ಜೋಳಗಳನ್ನು ಆಹಾರವಾಗಿ ನೀಡಿದ್ದರು. ಆದರೆ ಆನೆಯು ಆಹಾರ ಸೇವಿಸಲಾಗದೆ ಹಾಗೂ ಚಿಕಿತ್ಸೆಗೆ ಸ್ಪಂದಿಸದೇ ಆ.28ರ ಮಧ್ಯಾಹ್ನ ಮೃತಪಟ್ಟಿದೆ ಎಂದು ಬಂಡೀಪುರ ಅರಣ್ಯಾಧಿಕಾರಿ ಡಾ.ಪಿ.ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ನಂತರ ಬಂಡೀಪುರ ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಿ ಕಳೆಬರವನ್ನು ನಿಯಮಾನುಸಾರ ಅರಣ್ಯ ಪ್ರದೇಶದಲ್ಲಿ ವನ್ಯಪ್ರಾಣಿಗಳ ಆಹಾರಕ್ಕಾಗಿ ಬಿಡಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು