ಮೈಸೂರು: ಇದ್ದಕ್ಕಿದ್ದಂತೆ ಸಂಚರಿಸುತ್ತಿದ ಸಾರಿಗೆ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ಹೆಚ್.ಡಿ. ಕೋಟೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ ತಾಲ್ಲೂಕಿನ ಹೆಬ್ಬಲಗುಪ್ಪೆ ಗ್ರಾಮದಿಂದ ಹೆಚ್‍ಡಿ ಕೋಟೆ ಕಡೆಗೆ ಸಾರಿಗೆ ಬಸ್ ತೆರಳುತ್ತಿದ್ದ ಮಾರ್ಗ ಮಧ್ಯ ದೇವಲಾಪುರ ಮತ್ತು ಜಕ್ಕಹಳ್ಳಿ ಗ್ರಾಮದ ಬಳಿ ಇದ್ದಕ್ಕಿದ್ದಂತೆ ಬೆಂಕಿ ಹಂಚಿಕೊಂಡಿದೆ.
ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಕ್ಷಣ ಬಸ್ ಅನ್ನು ರಸ್ತೆಯ ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಡೆ ಇಳಿಸಿ ಅವಘಡದಿಂದ ಪಾರು ಮಾಡಿದ್ದಾನೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.