ನಂಜನಗೂಡು: ಅಳಗಂಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಾಲಾಕಿ ಗಂಡು ಚಿರತೆಯೊಂದು ಬೋನಿಗೆ ಬಿದ್ದಿದೆ. ನಂಜನಗೂಡು ತಾಲ್ಲೂಕಿನ ಅಳಗಂಚಿ ಗ್ರಾಮದಲ್ಲಿ ನಾಲ್ಕು ವರ್ಷದ ಗಂಡು ಚಿರತೆ ಸಿಲುಕಿಕೊಂಡಿದೆ.

ಕಳೆದ ಎರಡು ತಿಂಗಳಿಂದ ಗ್ರಾಮಸ್ಥರನ್ನು ಬೆಚ್ಚಿ ಬೆಳಿಸಿದ ಚಿರತೆ ಕೊನೆಗೂ ಲಾಕ್ ಆಗಿದೆ. ಎರಡು ತಿಂಗಳಿಂದ ಚಿರತೆಯ ಉಪಟಳ ಹೆಚ್ಚಾಗಿತ್ತು. ಸಾಕು ಪ್ರಾಣಿಗಳ ಮೇಲೆ ನಿರಂತರವಾಗಿ ದಾಳಿ ನಡೆಸಿ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಸಿತ್ತು.

ಈ ಬಗ್ಗೆ ಎಚ್ಚೆತ್ತ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಸೆರೆಗಾಗಿ ಅಳಗಂಚಿ ಗ್ರಾಮದ ಶ್ರೀ ಗುರು ಮಲ್ಲೇಶ್ವರ ಮಠಕ್ಕೆ ಸೇರಿದ ಜಮೀನೊಂದರಲ್ಲಿ ಬೋನನ್ನು ಇರಿಸಲಾಗಿತ್ತು. ಇಂದು ಸುಮಾರು ನಾಲ್ಕು ವರ್ಷದ ಗಂಡು ಚಿರತೆ, ಬೋನಿನೊಳಗೆ ಬಿದ್ದಿದೆ. ಇದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.