ಮೈಸೂರು: ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಜಿಂಕೆ ಮರಿ ಸಾವನ್ನಪ್ಪಿದ ಘಟನೆ ಮೈಸೂರು ನಂಜನಗೂಡು ರಾಷ್ಟ್ರೀಯ ಹೆದ್ದಾರಿ ಕಡಕೊಳ ಗ್ರಾಮದ ಬಳಿ ನಡೆದಿದೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಢಿಕ್ಕಿ ಹೊಡೆದ ಅಪರಿಚಿತ ವಾಹನ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.