ಕೊಳ್ಳೆಗಾಲ: ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ತೆರಳುತ್ತಿದ್ದ ಭಕ್ತ ಚಿರತೆ ದಾಳಿಗೆ ಬಲಿಯಾಗಿದ್ದಾನೆ. ಜೊತೆಯಲ್ಲಿ ಬಂದಿದ್ದ ಸ್ನೇಹಿತರು ಭಯದಿಂದ ಓಡಿ ತಪ್ಪಿಸಿಕೊಂಡಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದ ತಾಳುಬೆಟ್ಟದಿಂದ ಮೆಟ್ಟಿಲನ್ನು ಹತ್ತಿ ಹೋಗುವ ವೇಳೆ ಘಟನೆ ನಡೆದಿದೆ. ಮಂಡ್ಯ ಮೂಲದ ಪ್ರವೀಣ್ ಚಿರತೆ ದಾಳಿಗೆ ಬಲಿಯಾದ ಭಕ್ತ. ಈತ ಮಂಡ್ಯ ತಾಲೂಕಿನ ಚೀರನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಫೋನ್ ರಿಂಗ್ ಆದ್ರೂ ಪ್ರವೀಣ್ ಕಾಲ್ ರಿಸೀವ್ ಮಾಡಲಿಲ್ಲ. ತಕ್ಷಣವೇ ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆಗೆ ವಿಚಾರ ಮುಟ್ಟಿಸಿದ್ದಾರೆ.
ಅರಣ್ಯ ಹಾಗೂ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಮೃತ ದೇಹ ದೊರೆತಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಘಟನೆ ನಡೆದಿದೆ.

