ತಿ.ನರಸೀಪುರ: ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬೋನಿಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಿ.ನರಸೀಪುರ ತಾಲ್ಲೂಕಿನ ಶ್ರೀ ರಂಗರಾಜಪುರ ಗ್ರಾಮದ ಮಲ್ಲೇಶ ರವರ  ಜಮೀನಿನಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಸೆರೆಗಾಗಿ ಬೋನು ಇಟ್ಟಿದ್ದರು.

ಕಳೆದ ಒಂದು ವಾರದ ಹಿಂದೆ ಒಂದು ಹಸುವನ್ನು ಬಲಿ ಪಡೆದಿತ್ತು. ತಡರಾತ್ರಿಯಲ್ಲಿ ಚಿರತೆ ಬೋನಿಗೆ ಬಿದ್ದಿದೆ. ಇದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.