ನಂಜನಗೂಡು: ಕೌಟುಂಬಿಕ ಕಲಹಕ್ಕೆ ಮನನೊಂದು ಪೋಲಿಸ್ ಪೇದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ.
ಬೀರೇಶ್ 37 ಮೃತ ದುರ್ದೈವಿ. ಗುಂಡ್ಲುಪೇಟೆ ತಾಲೂಕಿನ ಚಿಕ್ಕಾಟಿ ಗ್ರಾಮದ ಬೀರೇಶ್ ಮೈಸೂರು ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೊಲೀಸ್ ಮುಖ್ಯಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು.ಬೀರೇಶ್ ತನ್ನ ಪತ್ನಿ ಹಾಗೂ ಮಗುವಿನೊಂದಿಗೆ ನಂಜನಗೂಡಿನ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ವಾಸವಿದ್ದರು ಎನ್ನಲಾಗಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದು ಕೊಠಡಿಯ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಪಟ್ಟಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರವೀಂದ್ರ, ಪಿಎಸ್ಐ ಕೃಷ್ಣಕಾಂತ ಕೋಳಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲ ಮಾಡಿಕೊಂಡು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.

