Categories: ಮೈಸೂರು

ಮೋದಿ ಪರ ಹಾಡು ಬರೆದ ಯುವಕನ ಮೇಲೆ ಮುಸ್ಲಿಮರಿಂದ ಹಲ್ಲೆ

ಮೈಸೂರು: ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ನಡೆದಿದೆ.

ರೋಹಿತ್ ಹಲ್ಲೆಗೆ ಒಳಗಾದ ಯುವಕ. ಈ ಸಂಬಂಧ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ರೋಹಿತ್‌ ದೂರು ನೀಡಿದ್ದು, ಹಲ್ಲೆಗೊಳಗಾದ ಯುವಕನನ್ನು ಪೊಲೀಸರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ನಾನು ಕಳೆದ ವಾರ ಮೋದಿ ಕುರಿತಾಗಿ ಸಾಂಗ್‌ ಮಾಡಿದ್ದೆ. ನಾನು ಜನರ ಜೊತೆ ಈ ಸಾಗ್‌ ತೋರಿಸಿ ಚಾನೆಲ್‌ ಸಬ್‌ಸ್ಕ್ರೈಬ್‌ ಮಾಡುವಂತೆ ಕೇಳಿಕೊಳ್ಳುತ್ತಿದ್ದೆ. ನಾನು ಸರ್ಕಾರಿ ಗೆಸ್ಟ್‌ ಹೌಸ್‌ನಲ್ಲಿ ಕುಳಿತುಕೊಂಡಿದಾಗ ಒಬ್ಬ ಹುಡುಗ ಬಂದಿದ್ದ.

ಆತನಿಗೆ ತೋರಿಸಿದಾಗ ಆತ ಹಾಡು ಚೆನ್ನಾಗಿದೆ ಎಂದು ಹೇಳಿ ಬನ್ನಿ ನಾನು ನನ್ನ ಸ್ನೇಹಿತರಿಗೂ ತೋರಿಸುತ್ತೇನೆ ಎಂದು ನನ್ನನ್ನು ಆತನ ಸ್ನೇಹಿತರ ಬಳಿ ಕರೆದುಕೊಂಡು ಹೋದನು.

ಈ ವೇಳೆ ಅವರು ಮೋದಿ ಬಗ್ಗೆ ಹಾಡು ಮಾಡ್ತೀಯಾ ಎಂದು ಪ್ರಶ್ನಿಸಿ ಪಾಕಿಸ್ತಾನದ ಪರ ಅಲ್ಲಾಹ್‌ ಪರ ಘೋಷಣೆ ಕೂಗುವಂತೆ ಒತ್ತಾಯ ಮಾಡಿದರು. ಅಷ್ಟೇ ಅಲ್ಲದೇ ನನ್ನ ಬಟ್ಟೆ ಹರಿದು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ನನಗೆ ಅವರು ಮುಸ್ಲಿಮ್‌ ಹುಡುಗರು ಅಂತ ಗೊತ್ತಿರಲಿಲ್ಲ ಎಂದು ವಿಡಿಯೋದಲ್ಲಿ ರೋಹಿತ್‌ ಹೇಳಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Chaitra Kulal

Recent Posts

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

1 min ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

15 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

31 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

56 mins ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

1 hour ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

9 hours ago