ಮೈಸೂರು: ಐತಿಹಾಸಿಕ ಮೈಸೂರು ಜಂಬೂಸವಾರಿಯಲ್ಲಿ ಸತತ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಗಜಪಡೆ ನಾಯಕ ಅಭಿಮನ್ಯು ಮುಂಬರುವ 2026ರ ದಸರಾ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಭಾಗವಹಿಸಲು ಸರ್ಕಾರ ಅನುಮತಿ ನೀಡಿದೆ.
60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಭಿಮನ್ಯುವಿಗೆ ಇತ್ತೀಚೆಗೆ ಗೌರವಪೂರ್ವ ನಿವೃತ್ತಿ ನೀಡಲಾಗಿತ್ತು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ, ಅಂಬಾರಿ ಹೊರಿಸದೆ ಕೇವಲ ನಿಶಾನೆ ಆನೆಯಾಗಿ ಗೌರವಪೂರ್ವಕ ಬೀಳ್ಕೊಡುಗೆ ನೀಡಲು ಸರ್ಕಾರ ಸಮ್ಮತಿಸಿದೆ.
ಈ ಸಂಬಂಧ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಅರಣ್ಯ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಆದೇಶಿಸಿದ್ದಾರೆ.

