ತಿ. ನರಸೀಪುರ: ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಭಯೋತ್ಪಾದಕರ ದಾಳಿಯನ್ನು ಖಂಡಿಸಿ ಎಬಿವಿಪಿ ವತಿಯಿಂದ ಪ್ರತಿಭಟನೆ ನಡೆಯಿತು. ವಿದ್ಯೋದಯ ಕಾಲೇಜ್ ಸರ್ಕಲ್ ನಿಂದ ಈ ವಿಧಾನಸೌಧದ ವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು.
ಪ್ರತಿಭಟನೆ ಕುರಿತು ವಿದ್ಯಾರ್ಥಿಗಳು ಮಾತನಾಡಿ ಜಮ್ಮು ಕಾಶ್ಮೀರದ ಪಹಲ್ಲಾಮನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ಹೇಡಿತನದ ಗುಂಡಿನ ದಾಳಿ ಕೃತ್ಯವನ್ನು ಎಬಿವಿಪಿ ತೀವ್ರವಾಗಿ ಖಂಡಿಸುತ್ತದೆ. ಭಯೋತ್ಪಾದಕರ ನುಸುಳುಕೋರರ ಹಾವಳಿ ತಡೆಗಟ್ಟಲು ಸಾಧ್ಯವಾಗಿಲ್ಲ.
ಇತ್ತೀಚೆಗೆ ವಲಸೆ ಕಾರ್ಮಿಕರ ಮೇಲಿನ ದಾಳಿಗಳು ಮಾರುಕಟ್ಟೆಗಳಲ್ಲಿ ದಾಳಿಗಳು ಹಾಗೂ ಇಂದು ನಡೆದಿರುವ ಪ್ರವಾಸಿಗರ ಮೇಲಿನ ದಾಳಿ ಗಮನಿಸುವುದಾದರೆ ಕಾಶ್ಮೀರದ ಶಾಂತಿ ಮತ್ತು ಭಾರತದೊಂದಿಗಿನ ಏಕತೆಗೆ ಉಗ್ರರು ಅರ್ಥಾತ್ ಪ್ರತ್ಯೇಕವಾದಿಗಳು ತೀವ್ರ ಸವಾಲುವೊಡ್ಡುತ್ತಿರುವುದು ಕಳವಳಕಾರಿಯದ ಸಂಗತಿಯಾಗಿದೆ. ಆದ್ದರಿಂದ ಕೇಂದ್ರ ಸರ್ಕಾರ ಉಗ್ರದ ವಿರುದ್ಧ ವ್ಯಾಪಕ ಕಠಿಣ ಕ್ರಮಗಳನ್ನು ಕೈಗೊಂಡು ತಕ್ಕ ಉತ್ತರವನ್ನು ನೀಡಬೇಕೆಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ. ಎಂದರು
ಭಯೋತ್ಪಾದಕರ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವವರಿಗೆ ಹಾಗೂ ಹತ್ಯೆಗೊಳಗಾಗಿರುವವರಿಗೆ ವಿದ್ಯಾರ್ಥಿ ಪರಿಷತ್ ಸಂತಾಪವನ್ನು ಸೂಚಿಸುತ್ತದೆ. ಭಯೋತ್ಪಾದಕರ ವಿರುದ್ಧ ಶೂನ್ಯ ಸಹಿಷ್ಣುತೆಯೊಂದಿಗೆ ಭಯೋತ್ಪಾದನೆಯನ್ನು ಮೂಲದಿಂದ ಕಿತ್ತೊಗೆಯಲು ಮಾನ್ಯ ಪ್ರಧಾನ ಮಂತ್ರಿಗಳು ಹಾಗೂ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ.

