ಮೈಸೂರು: ಜೋಳದರೊಟ್ಟಿ ಅಂಗಡಿಯಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣಗೊಂಡ ಘಟನೆ ಮೈಸೂರಿನ ಕಾಳಿದಾಸ ರಸ್ತೆಯಲ್ಲಿ ನಡೆದಿದೆ.

ಅನ್ನಪೂರ್ಣೇಶ್ವರಿ ಭಂಡಾರ್ ಹೆಸರಿನ ಜೋಳದರೊಟ್ಟಿ ಅಂಗಡಿಯಲ್ಲಿ ಘಟನೆ ನಡೆದಿದೆ. ಸಂಜೆ ಸುಮಾರು 5 ಗಂಟೆ ವೇಳೆಯಲ್ಲಿ ಸಿಲಿಂಡರ್ ಸೋರಿಕೆಯಿಂದ ಇಡೀ ಅಂಗಡಿಗೆ ಬೆಂಕಿಯ ಜ್ವಾಲೆ ವ್ಯಾಪಿಸಿದೆ.

ಬೆಂಕಿಯ ಆರ್ಭಟಕ್ಕೆ ಹೆದರಿ ಅಂಗಡಿಯಲ್ಲಿದ್ದ ನೌಕರರು ಹೊರಗೆ ಓಡಿಬಂದಿದ್ದಾರೆ. ನಂತರ ಅಗ್ನಿಶಾಮ ಠಾಣೆಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳೀಯ ಯುವಕರ ನೆರವಿನಿಂದ ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಯಾವುದೇ ಅನಾಹುತ ಸಂಭವಿಸಿಲ್ಲ. ವಿವಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.