ನಂಜನಗೂಡು: ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಜಲಜೀವನ್ ಮಿಷನ್ ಯೋಜನೆಯ ಪೈಪುಗಳು ಧಗ ಧಗನೇ ಹೊತ್ತಿ ಉರಿದ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಜೆಎಸ್ಎಸ್ ಕಾಲೇಜಿನ ಹಿಂಭಾಗದಲ್ಲಿರುವ ಟೀಚರ್ ಕಾಲೋನಿಯಲ್ಲಿ ಯಾವುದೇ ರೀತಿ ರಕ್ಷಣೆ ಇಲ್ಲದೆ ಸಂಗ್ರಹಿಸಲಾಗಿದ್ದ ಜಲಜೀವನ್ ಮಿಷನ್ ಯೋಜನೆಯ ಪ್ಲಾಸ್ಟಿಕ್ ಪೈಪ್ ಗಳಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.
ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿಗಾಗಿ ಮನೆಮನೆಗೆ ಗಂಗೆ ಯೋಜನೆಯ ಅಡಿಯಲ್ಲಿ ಲಕ್ಷಾಂತರ ಬೆಳೆ ಬಾಳುವ ಪೈಪುಗಳು ಮತ್ತು ಸಾಮಗ್ರಿಗಳನ್ನು ಇಡಲಾಗಿತ್ತು.
ಇಂದು ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ಮೌಲ್ಯದ ಪೈಪುಗಳು, ಇನ್ನಿತರ ವಸ್ತುಗಳು ಸುಟ್ಟು ಕರಕಲಾಗಿದೆ. ಬೆಂಕಿ ಅವಘಡದಿಂದ ಅಕ್ಕಪಕ್ಕದಲ್ಲಿದ್ದ ಸಾರ್ವಜನಿಕರು ಕೂಡ ಪಾರಾಗಿದ್ದಾರೆ.
ಇದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ. ಇನ್ನೂ ವಿಷಯ ತಿಳಿದು ಸ್ಥಳಕ್ಕೆ ಡಿವೈಎಸ್ಪಿ ರಘು, ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ಪಿಎಸ್ಐ ಚೇತನ್ ಕುಮಾರ್, ದೊಡ್ಡಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ, ಬೆಂಕಿ ನಂದಿಸಲು ಮುಂದಾಗಿದ್ದಾರೆ.

