ಮೈಸೂರಿನ ಸೆಂಟ್ ಫಿಲೋಮಿನಾ ಶಾಲೆಯಲ್ಲಿ ವಿದ್ಯಾರ್ಥಿಗೆ ಥಳಿಸಿದ ಆರೋಪ ಕೇಳಿ ಬಂದಿದ್ದು, ಶಿಕ್ಷಕ ಸುರೇಶ್ ವಿರುದ್ಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
16 ವರ್ಷದ ರೆಹಾನ್ ಷರೀಫ್ಗೆ ಮುಷ್ಠಿಯಿಂದ ಕಣ್ಣಿಗೆ ಥಳಿಸಲಾಗಿದೆ. ಹಲ್ಲೆಯಿಂದ ಕಣ್ಣಿನಲ್ಲಿ ರಕ್ತ ಹೆಪ್ಪುಗಟ್ಟಿರುವ ಮಾಹಿತಿ ತಿಳಿದು ಬಂದಿದೆ. ಸದ್ಯ ರೆಹಾನ್ ಷರೀಫ್ ಅಪಾಯದಿಂದ ಪಾರಾಗಿದ್ದಾನೆ.
ಘಟನೆ ಬಗ್ಗೆ ಯಾರಿಗಾದರೂ ಹೇಳಿದರೆ TC ನೀಡಿ ಕಳುಹಿಸುವುದಾಗಿ ಬೆದರಿಕೆ ಆರೋಪ ಮಾಡಲಾಗಿದೆ. ಶಿಕ್ಷಕನ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ತಂದೆ ವಾಸಿಮ್ ಷರೀಫ್ ದೂರು ದಾಖಲಿಸಿದ್ದಾರೆ.

