ಮೈಸೂರು: ನಕಲಿ ಸೀಲು ಬಳಕೆ ಮಾಡಿಕೊಂಡು ಪುರಸಭೆಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಲಾಗಿದೆ ಎಂದು ಸೇವಾಶ್ರಯ ಫೌಂಡೇಶನ್ ಸಂಸ್ಥಾಪಕ ಆರ್ ಮಣಿಕಂಠರಾಜ್ ಗೌಡ ಆರೋಪಿಸಿದರು.

ಮೈಸೂರು ಜಿಲ್ಲೆಯ ತಿ. ನರಸೀಪುರ ಪಟ್ಟಣದ ಕಬಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಬ್ಯಾಂಕಿನ ನಕಲಿ ಸೀಲು ಬಳಕೆ ಮಾಡಿ ಪುರಸಭೆಗೆ ಕೋಟ್ಯಾಂತರ ರೂ. ತೆರಿಗೆ ಹಣವನ್ನು ದೋಖಾ ಮಾಡಿದ್ದಾರೆ ಎಂದು ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ಪುರಸಭೆ ಮಾಜಿ ಅಧ್ಯಕ್ಷ ಕಾಂಗ್ರೆಸ್ ಪಕ್ಷದ ಹಾಲಿ ಸದಸ್ಯರಾದ ಸಿಎಂ ಸಿದ್ದರಾಮಯ್ಯ ಮತ್ತು ಎಂಎಲ್ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಮಾಜಿ ಪುರಸಭಾ ಅಧ್ಯಕ್ಷ ಟಿ.ಎಂ ನಂಜುಂಡಸ್ವಾಮಿ ಮೇಲೆ ಗಂಭೀರ ಆರೋಪ ಕೇಳಿಬಂದಿದೆ . ಪುರಸಭೆಯಲ್ಲಿ ನಡೆದಿರುವ ಅಕ್ರಮಗಳಿಗೆ ಸೂಕ್ತ ತನಿಖೆ ನಡೆಸಬೇಕು.

ಅಕ್ರಮದ ಬಗ್ಗೆ ಗೌಪ್ಯತೆಯನ್ನು ಪುರಸಭೆ ಅಧಿಕಾರಿಗಳು ಕಾಪಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಉನ್ನತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

