ಮೈಸೂರು: ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ಪಂಚಭಾಷಾ ನಟ ಮೋಹನ್ ಬಾಬು ಅವರ ಪುತ್ರ ಮಂಚು ಮನೋಜ್ ಅವರು ಬುಧವಾರ ಕುಟುಂಬ ಸಮೇತರಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.

ಈ ವೇಳೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಅವರು ಕುಟುಂಬದ ಸದಸ್ಯರೊಂದಿಗೆ ಆಶೀರ್ವಾದ ಪಡೆದು ಪ್ರಾರ್ಥನೆ ಸಲ್ಲಿಸಿದರು. ಬಳಿಕ ದೇವಸ್ಥಾನದ ವತಿಯಿಂದ ಪ್ರಸಾದ ನೀಡಿ ಗೌರವಿಸಲಾಯಿತು. ಮಂಚು ಮನೋಜ್ ಅವರ ಆಗಮನದಿಂದ ದೇವಸ್ಥಾನದಲ್ಲಿ ಭಕ್ತರು ಮತ್ತು ಅಭಿಮಾನಿಗಳ ಗಮನ ಸೆಳೆಯಿತು.

ಇದೇ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಜಿ ಶ್ರೀನಾಥ್ ಬಾಬು, ಜಿ ರಾಘವೇಂದ್ರ, ಮಂಜೇಶ, ಸುರೇಶ್,ಕಿರಣ್, ಹರೀಶ್ ನಾಯ್ಡು, ಹಾಗೂ ಇನ್ನಿತರರು ಹಾಜರಿದ್ದರು