Categories: ಮೈಸೂರು

ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಯದುವೀರ್ ವಿರುದ್ಧ ನಟಿ ರಮ್ಯಾ ಪ್ರಚಾರ

ಮೈಸೂರು: ರಾಜ್ಯದಲ್ಲಿ ಯಾರೂ ನಿರೀಕ್ಷೆಯನ್ನೇ ಮಾಡದ ಲೋಕಸಭಾ ಅಭ್ಯರ್ಥಿ ಎಂದರೆ ಅದು ಮೈಸೂರಿನ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡುವುದಾಗಿದೆ.

ಆದರೆ, ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡುವುದಕ್ಕೆ ಪ್ರಭಲ ಪೈಪೋಟಿ ಅಭ್ಯರ್ಥಿಯನ್ನು ಹುಡುಕದೇ, ಸ್ಥಳೀಯ ನಾಯಕ ಎಂ. ಲಕ್ಷ್ಮಣ್ ಅವರನ್ನು ಕಣಕ್ಕಿಳಿಸಿದೆ. ಈಗ ಮಹಾರಾಜ ಯದುವೀರ್ ಅವರ ವಿರುದ್ಧ ಚುನಾವಣಾ ಪ್ರಚಾರಕ್ಕಾಗಿ ಕಾಂಗ್ರೆಸ್‌ನಿಂದ ನಟಿ ರಮ್ಯಾ ಅವರನ್ನು ಕರೆತರುವುದಕ್ಕೆ ಕೈ ಮುಖಂಡರು ಪ್ಲ್ಯಾನ್ ಮಾಡಿದ್ದಾರೆ.

ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಎರಡು ಬಾರಿ ಬಿಜೆಪಿಯಿಂದ ಗೆಲುವು ಸಾಧಿಸಿದ್ದ ಸಂಸದ ಪ್ರತಾಪ್ ಸಿಂಹ ಅವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರು. ಇನ್ನು ರಾಜ್ಯದ ಬೇರಾವ ಸಂಸದನೂ ಕೂಡ ಮೈಸೂರು ಲೋಕಸಭಾ ಸಂಸದ ಪ್ರತಾಪ್ ಸಿಂಹ ಅವರಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ ಎಂದೇ ಎಲ್ಲರೂ ಹೇಳುತ್ತಿದ್ದರು.

ಆದರೆ, ಎಷ್ಟೇ ಅಭಿವೃದ್ಧಿ ಕಾರ್ಯ ಮಾಡಿದರೂ 2024ರ ಲೋಕಸಭಾ ಚುನಾವಣೆಯಲ್ಲಿ ಅವರಿಗೆ ಬಿಜೆಪಿಯಿಂದ ಟಿಕೆಟ್ ಕೊಡದೇ, ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಟಿಕೆಟ್ ನೀಡಲಾಗಿದೆ. ಮಹಾರಾಜ ಯದುವೀರ್ ಅವರು ಈಗಾಗಲೇ ಸ್ಥಳೀಯ ಮಟ್ಟಕ್ಕಿಳಿದು ಪ್ರಚಾರ ಕಾರ್ಯವನ್ನೂ ಆರಂಭಿಸಿದ್ದಾರೆ.

ರಂಗೇರುತ್ತಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾ ಕಣದಲ್ಲಿ ಈಗ ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್ ಪರವಾಗಿ ಸ್ಟಾರ್ ಪ್ರಚಾರಕಿಯಾಗಿ ಮಾಜಿ ಸಂಸದೆ ನಟಿ ರಮ್ಯ ಕರೆತರಲು ಕೈ ನಾಯಕರ ಪ್ಲ್ಯಾನ್ ಮಾಡಿದ್ದಾರೆ. ನಟಿ ರಮ್ಯ ಅವರ ಪಾಪ್ಯುಲಾರಿಟಿ ಬಳಸಿಕೊಳ್ಳಲು ಕಾಂಗ್ರೆಸ್ ಚಿಂತನೆ ಮಾಡಲಾಗಿದ್ದು, ಮೈಸೂರು, ಮಂಡ್ಯ ಕ್ಷೇತ್ರಗಳಲ್ಲಿ ಮಾಜಿ ಸಂಸದೆಯ ಪ್ರಚಾರಕ್ಕೆ ಮುಂದಾಗಲಿದ್ದಾರೆ ಎಂದು ತಿಳಿದು ಬಂದಿದೆ.

Ashitha S

Recent Posts

ಪ್ರವಾಸಕ್ಕೆ ಬಂದಿದ್ದ ಮಹಿಳೆ ನೀರಿನಲ್ಲಿ ಮುಳುಗಿ ಮೃತ್ಯು

ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಮೃತಪಟ್ಟ  ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ.

9 mins ago

ಯುವಜನರನ್ನು ಆಧ್ಯಾತ್ಮಿಕ ಜಗತ್ತಿಗೆ ಕೊಂಡೊಯ್ದ ಗೊಸ್ಪೆಲ್ ಗಾಲಾ

ಆಧ್ಯಾತ್ಮಿಕ ವಿಚಾರದಿಂದ ದೂರ ಹೋಗುತ್ತಿರುವ ಯುವಜನರನ್ನು ಧಾರ್ಮಿಕ ವಿಚಾರಗಳತ್ತ ಸೆಳೆಯುವ ನಿಟ್ಟಿನಲ್ಲಿ ಕಲ್ಯಾಣಪುರ ವಲಯದ ಕ್ರೈಸ್ತ ಯುವಸಮುದಾಯಕ್ಕೆ ತೊಟ್ಟಂ ಸಂತ…

19 mins ago

ಜಾಗದ ತಕರಾರು: ನಗರಸಭಾ ಸದಸ್ಯನಿಂದ ದಂಪತಿ ಮೇಲೆ ಹಲ್ಲೆ, ಜೀವಬೆದರಿಕೆ

ಜಾಗದ ತಕರಾರಿಗೆ ಸಂಬಂಧಿಸಿ ದಂಪತಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ…

33 mins ago

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ : ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು - ಅಳಿಕೆ ಬಂಟ್ವಾಳ…

44 mins ago

ಭಾರೀ ಗಾಳಿ ಮಳೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ…

47 mins ago

ದ.ಕ ಬರ ಪರಿಸ್ಥಿತಿ ಹಿನ್ನಲೆ ನೀರು ಪೂರೈಕೆಗೆ ಜಿಲ್ಲಾಡಳಿತ ಮುಂಜಾಗೃತ ಕ್ರಮ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಸಾರ್ವಜನಿಕರಿಗರ ಕುಡಿಯುವ ನೀರನ್ನು ಪೂರೈಸಲು ಜಿಲ್ಲಾಡಳಿತದಿಂದ ಈಗಾಗಲೇ ಸಾಕಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ.…

54 mins ago