ಮೈಸೂರು: ಸಿಎಂ ಕುರ್ಚಿಗಾಗಿ ಜಾಟಪಟಿ ಹೆಚ್ಚುತ್ತಿದೆ. ಸಿದ್ದರಾಮಯ್ಯ ಬೆನ್ನಿಗೆ ಅಹಿಂದಾ ಸಮುದಾಯ ನಿಂತಿದೆ. ಜಲದರ್ಶಿನಿ ಅತಿಥಿಗೃಹದಲ್ಲಿ ದುಂಡುಮೇಜಿನ ಸಭೆ ನಡೆಸಿದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ಸಭೆ ನಡೆದಿದೆ. ಹೈಕಮಾಂಡ್ ಮೇಲೆ ಅಹಿಂದಾ ತೀವ್ರ ಒತ್ತಡ ಹೇರಿದೆ. ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರೆಸುವಂತೆ ತಾಕೀತು ಮಾಡಿದೆ.
ಸಭೆ ಬಳಿಕೆ ಸದಸ್ಯರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಮೈಸೂರು ಹುಣಸೂರು ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಿದ್ದರಾಮಯ್ಯ ಪರ ಭರ್ಜರಿ ಬ್ಯಾಟಿಂಗ್ ನಡೆಸಿದ್ದಾರೆ.

