ಮೈಸೂರು: ಇದೇ ಪ್ರಪ್ರಥಮ ಬಾರಿಗೆ ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ ಮತ್ತು ಸರಗೂರು ತಾಲ್ಲೂಕುಗಳಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ. ಮಲ್ಲಿಕಾರ್ಜುನ ಖರ್ಗೆ ರವರ 84ನೇ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುತ್ತದೆ ಎಂದು ಡಾ. ಮಲ್ಲಿಕಾರ್ಜುನ ಖರ್ಗೆ ಅಭಿಮಾನಿಗಳ ಬಳಗದ ಅಧ್ಯಕ್ಷ ಸುರೇಶ್ ಜಿಯಾರ ತಿಳಿಸಿದರು.
ಸರಗೂರು ಪಟ್ಟಣದಲ್ಲಿ ಮಾತನಾಡಿದ ಅವರು, ಡಾ. ಮಲ್ಲಿಕಾರ್ಜುನ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಡಾ. ಮಲ್ಲಿಕಾರ್ಜುನ ಖರ್ಗೆ ರವರ ಹುಟ್ಟುಹಬ್ಬವನ್ನು ರಕ್ತದಾನ ಶಿಬಿರ ಹಮ್ಮಿಕೊಳ್ಳುವ ಮೂಲಕ ಆಚರಣೆ ಮಾಡಲಾಗುತ್ತದೆ. ಕ್ಷೇತ್ರದ ಶಾಸಕರ ಜೊತೆಗೂಡಿ ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಅದ್ಧೂರಿಯಾಗಿ ಖರ್ಗೆ ಸಾಹೇಬರ ಹುಟ್ಟು ಹಬ್ಬವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.

