ನಂಜನಗೂಡು: ನಂದಿನಿ ಪಾರ್ಲರ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದೆ. ನಂಜನಗೂಡು ತಾಲ್ಲೂಕಿನ ಹೆಡಿಯಾಲ ಗ್ರಾಮದ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿರುವ ಪಾರ್ಲರ್ ನಲ್ಲಿ ಮಾರಾಟ ಮಾಡುತ್ತಿರುವ ಆರೋಪ ಇದಾಗಿದೆ.

ರೂಟ್ ನಂಬರ್ 126 ಏಜೆನ್ಸಿ ಸಂಖ್ಯೆ 507ರ ನಂದಿನಿ ಪಾರ್ಲರ್ ನಲ್ಲಿ ರಹಸ್ಯವಾಗಿ ಮದ್ಯೆ ಪ್ಯಾಕೆಟ್ ಗಳನ್ನ ಗ್ರಾಹಕರಿಗೆ ಎತ್ತಿಕೊಡುವ ದೃಶ್ಯ ಸ್ಥಳೀಯರು ಮೊಬೈಲ್ ಸೆರೆ ಹಿಡಿದಿದ್ದಾರೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಮತ್ತು ಸಂಜೆ 7 ರಿಂದ ರಾತ್ರಿ 10 ಗಂಟೆವರೆಗೆ ಮದ್ಯ ಮಾರಾಟವಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಗ್ರಾಮ ಪಂಚಾಯಿತಿ ಮುಂಭಾಗವೇ ಇಂತಹ ಅಕ್ರಮ ನಡೆಯುತ್ತಿದ್ದರೂ ಅಧಿಕಾರಿಗಳ ಗಮನಕ್ಕೆ ಬಾರದಿರುವುದು ವಿಪರ್ಯಾಸ.