ನಂಜನಗೂಡು: ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಕಿರುಗುಂದ ಗ್ರಾಮದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಭವನವನ್ನು ಟೇಪ್ ಕತ್ತರಿಸುವ ಮೂಲಕ ಸಂಸದ ಸುನೀಲ್ ಬೋಸ್ ಮತ್ತು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಿದರು.

ಬಳಿಕ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿದರು. ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭವನವನ್ನು ಸುಮಾರು 30 ಲಕ್ಷದಲ್ಲಿ ನಿರ್ಮಿಸಲಾಗಿದೆ. ಭವನವನ್ನು ಗ್ರಾಮಸ್ಥರು ಸದ್ಬಳಕೆ ಮಾಡಿಕೊಳ್ಳಿ, ಪ್ರತಿ ಹಳ್ಳಿಗಳಲ್ಲಿ ಅಂಬೇಡ್ಕರ್ ಅವರ ಜಯಂತೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಅವರ ತತ್ವ, ಆದರ್ಶಗಳು, ವಿಚಾರಗಳನ್ನು ತಿಳಿದುಕೊಂಡು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸ ಮಾಡಬೇಕು ಆಗ ಮಾತ್ರ ದೇಶ ಸುಭದ್ರವಾಗುತ್ತದೆ ಎಂದರು.

ಕಿರುಗುಂದ ಗ್ರಾಮದಲ್ಲಿ ಸುಮಾರು 15 ಲಕ್ಷ ರೂ ವೆಚ್ಚದ ಗ್ರಂಥಾಲಯ ನಿರ್ಮಾಣ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಮತ್ತು ಸಂಸದ ಸುನೀಲ್ ಬೋಸ್ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಸದ ಸುನೀಲ್ ಬೋಸ್, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ಶಾಸಕರಾದ ದರ್ಶನ್ ಧ್ರುವನಾರಾಯಣ್, ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ಗ್ರಾಪಂ ಅಧ್ಯಕ್ಷೆ ಕೋಮಲ ಸಿದ್ದರಾಜು, ಗ್ರಾಪಂ ಸದಸ್ಯರಾದ ಆನಂದಕುಮಾರ್, ರತ್ನಮ್ಮ, ಗುರುಸಿದ್ದೇಗೌಡ, ರೋಹಿಣಿ ಪುಟ್ಟರಾಜು, ಪಿಎಸ್ಐ ರವಿಶಂಕರ್, ಪಿಡಿಒ ಗೀತಾ, ಸಹಾಯಕ ಅಭಿಯಂತರ ಮಹದೇವಯ್ಯ, ಗುತ್ತಿಗೆದಾರ ಸಿ.ಆರ್ ಮಹದೇವು, ಯಜಮಾನರಾದ ಮಹದೇವಯ್ಯ, ರಮೇಶ್ ಸೇರಿದಂತೆ ಜೈ ಭೀಮ್ ಯುವಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.