ಮೈಸೂರು: ಮೈಸೂರು ತಾಲ್ಲೂಕಿನ ವರುಣ ಗ್ರಾಮದಲ್ಲಿ ಭಾರತ ರತ್ನ ಡಾ. ಬಿಆರ್ ಅಂಬೇಡ್ಕರ್ ಸರ್ಕಲ್ ನಾಮಫಲಕವನ್ನು ವಿಧಾನಪರಿಷತ್ ಸದಸ್ಯ ಡಾ.ಯತೀಂದ ಲೋಕಾರ್ಪಣೆ ಮಾಡಿದರು.
ಬಳಿಕ ಮಾತನಾಡಿದ ಅವರು, ಅಂಬೇಡ್ಕರ್ ರವರು ಕೇವಲ ಒಂದೇ ಜಾತಿಗೆ ಸೀಮಿತವಲ್ಲ ಅವರು ಎಲ್ಲ ಸಮುದಾಯಗಳ ಆಸ್ತಿಯಾಗಿದ್ದಾರೆ. ಮಹಿಳೆಯರು ಇಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಗುರುತಿಸಿಕೊಂಡಿದ್ದಾರೆ ಎಂದರೆ ಅದಕ್ಕೆ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನವೇ ಕಾರಣ.
ಹಾಗಾಗಿ ಅಂಬೇಡ್ಕರ್ ಅವರನ್ನು ಪ್ರತಿಯೊಬ್ಬರು ಸ್ಮರಿಸಿಕೊಳ್ಳಬೇಕು. ಅವರು ಹಾಕಿಕೊಟ್ಟಿರುವ ಮಾರ್ಗದಲ್ಲಿ ನಾವು ಸಾಗಬೇಕಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ವಾಣಿ ಕೆ.ಶಿವರಾಂ ಸೇರಿದಂತೆ ಹಲವರು ಭಾಗವಹಿಸಿದ್ದರು.

